ಕರ್ಪೂರಿ ಠಾಕೂರ್ ಗೆ ಭಾರತ ರತ್ನ ನೀಡಿದ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ 

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತಯಂತ್ರದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ನ ನಾಯಕ ದಿಗ್ವಿಜಯ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ಇವಿಎಂ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿರುವ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಸತ ವ್ಯಕ್ತಪಡಿಸಿದ್ದು, ಸ್ವಾಗತಿಸಿದ್ದಾರೆ. ಕರ್ಪೂರಿ ಠಾಕೂರ್ ಅವರನ್ನು ಬಿಹಾರದ ದೇವರಾಜ ಅರಸು ಎನ್ನುತ್ತಿದ್ದರು ಎಂಬುದನ್ನು ಸಿದ್ದರಾಮಯ್ಯ ಸ್ಮರಿಸಿದ್ದಾರೆ.
 
ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕರ್ಪೂರಿ ಠಾಕೂರ್ ಅವರು ಸಾಮಾಜಿಕ ನ್ಯಾಯದ ಪ್ರಬಲ ಬೆಂಬಲಿಗರಾಗಿದ್ದರು ಎಂದು ಹೇಳಿದ್ದಾರೆ.
 
ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಿಯಾಗಿದ್ದವರಿಗೆ ಭಾರತ ರತ್ನದ ಗೌರವ ದೊರೆತಿರುವುದು ಅತ್ಯಂತ ಸಂತಸದ ವಿಷಯವಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿದ್ದಾರೆ.

ಎಪ್ಪತ್ತರ ದಶಕದಲ್ಲಿ ಕರ್ನಾಟಕದ ಮಾದರಿಯಲ್ಲಿ ಬಿಹಾರದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಕರ್ಪೂರಿ ಠಾಕೂರ್ ಅವರನ್ನು "ಬಿಹಾರದ ದೇವರಾಜ್ ಅರಸು" ಎಂದು ಬಣ್ಣಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

‘‘ಹಿಂದುಳಿದ ಸವಿತಾ ಸಮುದಾಯಕ್ಕೆ ಸೇರಿದ ಕರ್ಪೂರಿ ಠಾಕೂರ್ ಅವರು ಜಾತಿ ಪೀಡಿತ ಬಿಹಾರ ರಾಜ್ಯಕ್ಕೆ ಎರಡು ಬಾರಿ ಮುಖ್ಯಮಂತ್ರಿಯಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಅವರು ಭಾರತ ರತ್ನಕ್ಕೆ ಅತ್ಯಂತ ಅರ್ಹ ವ್ಯಕ್ತಿ, ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com