ರಾಜ್ಯದಲ್ಲಿಂದು 76 ಕೊರೋನಾ ಸೋಂಕು ಪ್ರಕರಣ ದೃಢ, 109 ಸೋಂಕಿತರು ಗುಣಮುಖ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 76 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. 109 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 349 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 76 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. 109 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 349 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ 25 ಹೊಸ ಪ್ರಕರಣಗಳು ವರದಿಯಾಗಿದ್ದು, 18 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.  ಮೈಸೂರಿನಲ್ಲಿ 9, ಬಳ್ಳಾರಿ, ಮಂಡ್ಯ, 6, ತುಮಕೂರಿನಲ್ಲಿ 5, ವಿಜಯನಗರದಲ್ಲಿ 4, ಕೋಲಾರ, ಗದಗ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿಯಲ್ಲಿ ತಲಾ 2 ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ  ಒಟ್ಟಾರೇ 5,037 ಪರೀಕ್ಷೆ ಮಾಡಲಾಗಿದ್ದು, ಪಾಸಿಟಿವಿಟಿ ದರ ಶೇ. 1.50 ರಷ್ಟಿದ್ದು, ಮರಣ ಪ್ರಮಾಣ ಶೇ. 0.00 ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com