ರಾಹುಲ್ ಗಾಂಧಿಗೆ ಭದ್ರತೆ ಒದಗಿಸಿ: ಕೇಂದ್ರ, ಅಸ್ಸಾಂ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಮತ್ತು ಅಸ್ಸಾಂ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮೈಸೂರು: ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಮತ್ತು ಅಸ್ಸಾಂ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.

ಪಿರಿಯಾಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ ಎಂದು ಹೇಳಿದ್ದಾರೆ.

“ಇದು ಅಸಂವಿಧಾನಿಕ. ಸರ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಒಬ್ಬ ಮುಖ್ಯಮಂತ್ರಿ ಈ ರೀತಿ ವರ್ತಿಸಬಾರದು. ದೇಶದ ಜನರ ಸಮಸ್ಯೆಗಳನ್ನು ಅರಿಯಲು ರಾಹುಲ್ ಪಾದಯಾತ್ರೆ ಕೈಗೊಂಡಿದ್ದಾರೆ. ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಮೊದಲು ಕಾಂಗ್ರೆಸ್ನಲ್ಲಿದ್ದು, ನಂತರ ಬಿಜೆಪಿಗೆ ಹೋಗಿ ಮುಖ್ಯಮಂತ್ರಿಯಾಗಿದ್ದಾರೆ. ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರನ್ನು ಮೆಚ್ಚಿಸಲೆಂದು ಈ ರೀತಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಲೋಪವಲ್ಲದೇ ಅವರ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಸೋತಿದೆ. ಹಾಗೂ ಇಂಥದ್ದಕ್ಕೆ ಪ್ರಚೋದನೆ ನೀಡುವುದು ಸಂವಿಧಾನಬಾಹಿರ ಎಂದು ಕಿಡಿಕಾರಿದರು.

ಇದೇ ವೇಳೆ ಬರ ಪರಿಹಾರ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಇನ್ನೂ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಕೊಟ್ಟಿಲ್ಲ. 2 ತಿಂಗಳ ಹಿಂದೆಯೇ ಖುದ್ದಾಗಿ ಭೇಟಿ ನೀಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. ಬೇಗನೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿ’’ ಎಂದು ಕೇಳಿದ್ದೆವು. ಪ್ರಧಾನಿ ಬೆಂಗಳೂರಿಗೆ ಬಂದಾಗಲೂ ಬರ ಪರಿಹಾರ ನೀಡುವಂತೆ ಕೇಳಿದ್ದೆ. ಸದ್ಯಕ್ಕೆ ರಾಜ್ಯದಲ್ಲಿ ನಾವೇ ಬರ ಪರಿಸ್ಥಿತಿ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

“ರಾಜ್ಯ ಸರ್ಕಾರವೇ ಈವರೆಗೆ 550 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರೈತರಿಗೆ 2,000 ರೂಪಾಯಿ ಬರ ಪರಿಹಾರಕ್ಕಾಗಿ ನೀಡುತ್ತಿದ್ದೇವೆ. ಒಂದು ವಾರದೊಳಗೆ ಎಲ್ಲಾ ರೈತರ ಖಾತೆಗೆ ಮೊದಲ ಕಂತಿನ ಹಣ ತಲುಪುತ್ತದೆ ಎಂದರು.

ಜಗದೀಶ್ ಶೆಟ್ಟರ್ ಪುನಃ ಬಿಜೆಪಿಗೆ ಹಿಂದಿರುಗುವ ಬಗ್ಗೆ ಕುರಿತ ಪ್ರಶ್ನೆಗೆ ಉತ್ತರಿಸಿ, ಅವರೇ ನಾನು ಪುನಃ ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಅವರು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com