ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿಯಾಗಿ ಪಿಎ ಮುರಳಿ ನೇಮಕ 

ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. 
ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿ
ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿ

ಶೃಂಗೇರಿ: ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. 

ಜ.25 ರಿಂದ ಜಾರಿಗೆ ಬರುವಂತೆ ಪಿ.ಎ ಮುರಳಿ ಅವರನ್ನು ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿಯನ್ನಾಗಿ ಜಗದ್ಗುರು ಭಾರತೀ ತೀರ್ಥ ಸ್ವಾಮಿಗಳು ನೇಮಕ ಮಾಡಿದ್ದಾರೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. 

1986 ರಲ್ಲಿ ಈ ಹಿಂದಿನ ಜಗದ್ಗುರುಗಳಾಗಿದ್ದ ಅಭಿನವ ವಿದ್ಯಾತೀರ್ಥ ಸ್ವಾಮಿಗಳು ನೇಮಕ ಮಾಡಿದ್ದ ಗೌರಿ ಶಂಕರ್ ಅವರು ಮಠದ ಹಾಲಿ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದೀರ್ಘ 35 ವರ್ಷಗಳ ಕಾಲ ಶ್ರೀಮಠದ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ಗೌರಿ ಶಂಕರ್ ಅವರಿಗೆ ಫೆಬ್ರವರಿ 12ರಂದು ಮಠದಲ್ಲಿ ಅಭಿನಂದನಾ ಸಮಾರಂಭವನ್ನು ಸಹ ಆಯೋಜಿಸಲಾಗಿದೆ.  ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಸ್ವಾಮಿಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಗಳಿಗೆ ಮುಖ್ಯ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com