ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಬಳಿ ಏಕಾಏಕಿ ನುಗ್ಗಿದ ವ್ಯಕ್ತಿ ಪೊಲೀಸರ ವಶಕ್ಕೆ

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆಯೊಂದು ಶುಕ್ರವಾರ ನಡೆದಿದೆ.
ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು.
ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು.

ಬೆಂಗಳೂರು: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆಯೊಂದು ಶುಕ್ರವಾರ ನಡೆದಿದೆ.

ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com