ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಸಿದ್ಧತೆ: ಫೆ.1ಕ್ಕೆ ಸಿಡಬ್ಲ್ಯುಎಂಎ ಪೂರ್ವಭಾವಿ ಸಭೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಫೆಬ್ರವರಿ 1 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪೂರ್ವಭಾವಿ ಸಭೆ ಕರೆದಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಫೆಬ್ರವರಿ 1 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪೂರ್ವಭಾವಿ ಸಭೆ ಕರೆದಿದೆ ಎಂದು ತಿಳಿದುಬಂದಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಆನೇಕಲ್ ನಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಫೆ.1ರಂದು ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪೂರ್ವಭಾವಿ ಸಭೆ ನಡೆಸುತ್ತಿದೆ ಎಂದು ಹೇಳಿದರು.

ಯೋಜನೆಗಾಗಿ ಭೂಮಿ ಕಳೆದುಕೊಳ್ಳುವವರಿಗೆ ಕಂದಾಯ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಭೂಮಿಯನ್ನು ಗುರುತಿಸಲಾಗುತ್ತಿದೆ. ಈ ಯೋಜನೆಯು ಬೆಂಗಳೂರು ನಗರದ ಜನರಿಗೆ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com