ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಕೆಲ ಕಾಲ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ..!

ತಾಂತ್ರಿಕ ದೋಷದಿಂದಾಗಿ ತಾತ್ಕಾಲಿಕವಾಗಿ ಕೆಲ ಕಾಲ ಮೆಟ್ರೋ ಸಂಚಾರ ಇಂದು ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.
ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿರುವ ಪ್ರಯಾಣಿಕರು.
ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿರುವ ಪ್ರಯಾಣಿಕರು.
Updated on

ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ತಾತ್ಕಾಲಿಕವಾಗಿ ಕೆಲ ಕಾಲ ಮೆಟ್ರೋ ಸಂಚಾರ ಇಂದು ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.

ಇಂದಿರಾ ನಗರ ನಿಲ್ದಾಣದಿಂದ ನೇರಳೆ ಮಾರ್ಗಕ್ಕೆ ವಿದ್ಯುತ್ ಪಡೆಯಲು ಸಾಧ್ಯವಾಗದ ಕಾರಣ ಇಂದು ಬೆಳಗ್ಗೆ 9.15ರಿಂದ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಇನ್ನೊಂದು ಗಂಟೆಯಲ್ಲಿ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ನ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರ್ಯನಿರ್ವಾಹಕ ನಿರ್ದೇಶಕ ಎ ಎಸ್ ಶಂಕರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೀಣ್ಯ – ನಾಗಸಂದ್ರ ನಡುವೆ 3 ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ
ಹಸಿರು ಮಾರ್ಗ ಪ್ರಯಾಣಿಕರಿಗೆ ಪೀಣ್ಯ ಹಾಗೂ ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ.

ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರ ಜನವರಿ 26 ರಿಂದ ಜನವರಿ 28ರ ತನಕ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿತ್ತು. ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.

ಮೆಟ್ರೋದ ಎರಡನೇ ಹಂತದ ಕಾಮಗಾರಿ ಕೂಡ ಸದ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ನಗರದ ಎಲ್ಲ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಆರ್​ಸಿಎಲ್ ಚುರುಕಿನ ಕಾಮಗಾರಿ ನಡೆಸುತ್ತಿದೆ. ಇದರಡಿ ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗ ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಮಾದವಾರ ವರೆಗೆ ಮೆಟ್ರೋ ಸೇವೆ ದೊರೆಯಲಿದೆ.

ಮೆಟ್ರೋ ಸಂಚಾರ ಸ್ಥಗಿತಗೊಳ್ಳುವ ಕಾರಣ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸದ್ಯ ನಮ್ಮ ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆ ಬರೊಬ್ಬರಿ 6.5 ಲಕ್ಷ ಜನ ಸಂಚರಿಸುತ್ತಿದ್ದಾರೆ. ಈ ಪೈಕಿ 80 ಸಾವಿರದಿಂದ 1 ಲಕ್ಷ ಜನ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದಾರೆ. ಇದು ಟಿಕೆಟ್ ಕೌಂಟರ್​​ನ ಒತ್ತಡ ಕಡಿಮೆ ಆಗಲು ಕಾರಣವಾಗಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com