ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬಿಜೆಪಿಗೆ ವಾಪಸ್ ಆಗಿರುವ ಜಗದೀಶ್ ಶೆಟ್ಟರ್ ಅವರ ಬೆನ್ನಲ್ಲೇ ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬಿಜೆಪಿಗೆ ವಾಪಸ್ ಆಗಿರುವ ಜಗದೀಶ್ ಶೆಟ್ಟರ್ ಅವರ ಬೆನ್ನಲ್ಲೇ ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರಳಿ ತೆಗೆದುಕೊಳ್ಳುವ ಸಂಪೂರ್ಣ ಪ್ರಕ್ರಿಯೆ ಪಕ್ಷದ ನಿರ್ಧಾರವಾಗಿದ್ದು, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, 'ಜಗದೀಶ್ ಶೆಟ್ಟರ್ ಪಕ್ಷಕ್ಕೆ ಮರುಸೇರ್ಪಡೆಯಾಗುವ ಆಲೋಚನೆಯಿಂದ ಎಂದಿಗೂ ವಿಮುಖರಾಗಿರಲಿಲ್ಲ. ಮೇಲಾಗಿ, ಹಿರಿಯ ನಾಯಕ ಇನ್ನಾದರೂ ಬಿಜೆಪಿಗೆ ಮರಳಿದ್ದಾರೆ. ಶೆಟ್ಟರ್ ಮಾತ್ರವಲ್ಲದೇ, ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ವಿಚಾರಧಾರೆಯೂ ಇದೇ ಆಗಿದ್ದು, ಅವರು ಮರಳಿ ಬಂದರೆ ಅವರನ್ನೂ ತುಂಬು ಹೃದಯದಿಂದ ಸ್ವಾಗತಿಸಲಾಗುವುದು. ಬಿಜೆಪಿಗೆ ಲಿಂಗಾಯತರು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಬೆಂಬಲ ಬೇಕು ಎಂದು ಹೇಳಿದ ಜೋಶಿ, ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ ಕೂಡ ಮೂಲತಃ ಬಿಜೆಪಿಯವರಾಗಿದ್ದು, ಅವರು ಮತ್ತೆ ಸೇರ್ಪಡೆಗೊಂಡರೆ ಅವರನ್ನೂ ಸ್ವಾಗತಿಸಲಾಗುವುದು.

ಅಂತೆಯೇ ಇಂದು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಶೆಟ್ಟರ್ ಉಪಸ್ಥಿತರಿದ್ದು, ಮರಳಿ ಸ್ವಾಗತ ಎಂದು ಹೇಳುವ ಮೂಲಕ ಶುಭ ಹಾರೈಸಿದ್ದೇನೆ ಎಂದರು.

ದೆಹಲಿಯಲ್ಲಿದ್ದರೂ ಶೆಟ್ಟರ್ ಪಕ್ಷಕ್ಕೆ ಸೇರ್ಪಡೆಗೊಂಡಾಗ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್ ಗೈರುಹಾಜರಾದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ನಾನು ನಿಗದಿತ ಸಭೆ ನಡೆಸಿದ್ದೇನೆ ಮತ್ತು ಆ ದಿನ ಬೆಲ್ಲದ್ ಅವರೊಂದಿಗೆ ಇರಲಿಲ್ಲ, ಆದರೆ ಅವರು ಈ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರು ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಕುರಿತು ಪಕ್ಷವು ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಏನೂ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ. ಆದರೆ, ಅವರ ಕಡೆಯವರು ಈಗಾಗಲೇ ಚುನಾವಣಾ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ತಾವು ಕಣದಲ್ಲಿರುವ ಕುರಿತು ಸೂಚಿಸಿದರು. ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡದ ಅಭ್ಯರ್ಥಿ ನಾನೇ ಎಂದು ಪ್ರತಿಪಾದಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com