ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ, ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ?: ಸಿಎಂ ಸಿದ್ದರಾಮಯ್ಯ

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂತರಾಜು ಸಮಿತಿ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದಾಗ. 2018ರಲ್ಲಿ ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ 'ಶೋಷಿತರ ಜಾಗೃತಿ ಸಮಾವೇಶವನ್ನು' ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ 'ಶೋಷಿತರ ಜಾಗೃತಿ ಸಮಾವೇಶವನ್ನು' ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
Updated on

ಚಿತ್ರದುರ್ಗ: ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂತರಾಜು ಸಮಿತಿ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದಾಗ. 2018ರಲ್ಲಿ ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ.

ನಂತರ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂಗಳಾದ ಹೆಚ್​ಡಿ. ಕುಮಾರಸ್ವಾಮಿ‌ ಮತ್ತು ನಂತರ ಬಂದ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು ವರದಿ ಪಡೆಯಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರಲ್ಲಿ ವರದಿ ಕೊಡಿ ಅಂತ ನಾನು ಹೇಳಿದ್ದೇನೆ. ಲೋಪದೋಷ ಇದ್ದರೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಹೇಳಿದರು. 

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ರಾಜ್ಯಗಳಲ್ಲಿ  ಜಾತಿ ಗಣತಿ ವರದಿಯನ್ನು ತರುತ್ತೇವೆ ಎಂದು ನಾವು ಹೇಳಿದ್ದೇವೆ. ನೀವು ಕೊಟ್ಟ ಎಲ್ಲ ಬೇಡಿಕೆಗಳಿಗೆ ಸಹಮತ ಇದೆ. ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ಮಾಡುತ್ತೇವೆ. ನಾನು ಯಾವಾಗಲೂ ನಿಮ್ಮ ಪರ ಇರುತ್ತೇನೆ. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನು ಸಂಸತ್ತು ಭವನ ಉದ್ಘಾಟನೆಗೆ ಕರೆಯಲಿಲ್ಲ. ರಾಮಂದಿರ ಉದ್ಘಾಟನೆಗೂ ಕರೆಯಲಿಲ್ಲ ಎಂದು ಬಿಜೆಪಿ ವಿರುದ್ಧ ಇದೇ ಸಂದರ್ಭದಲ್ಲಿ ಸಿಎಂ ವಾಗ್ದಾಳಿ ನಡೆಸಿದರು. 

ಸಮಾಜದಲ್ಲಿ ಅಸಮಾನತೆ, ನಿರಂತರ ಶೋಷಣೆ: ಕೆಲವು ಶಕ್ತಿಗಳು ನನ್ನನ್ನು ವಿರೋಧಿಸುತ್ತಿವೆ. ಇದೊಂದು ಐತಿಹಾಸಿಕ ಸಮಾವೇಶ. ಸಮಾಜದಲ್ಲಿ ಹಿಂದಿನಿಂದಲೂ ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆದಿದೆ. ಸಂವಿಧಾನದಿಂದಾಗಿ ಶೋಷಣೆ ಕಡಿಮೆಯಾಗಿದೆ. ಮೀಸಲಾತಿಯನ್ನು ಆರ್​​ಎಸ್​ಎಸ್, ಬಿಜೆಪಿ ವಿರೋಧ ಮಾಡುತ್ತಿದೆ. ಕೆಲವು ಶಕ್ತಿಗಳು ನನ್ನನ್ನು ವಿರೋಧ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಕುರಿ ಕಾಯುವವನ ಮಗ ಸಿಎಂ ಆದ ಎಂದು ವಿರೋಧ ಮಾಡುತ್ತಾರೆ. 14 ಬಜೆಟ್ ಮಂಡಿಸಿದವನು ನಾನು. ಅನ್ನಭಾಗ್ಯ, ಶೂಭಾಗ್ಯ, ಪಶು ಭಾಗ್ಯ ಕೊಟ್ಟಿದ್ದು ತಪ್ಪೇ? ಇವತ್ತು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ? ಇದಕ್ಕೆ ನನ್ನನ್ನು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದು ಸರ್ಕಾರ, ಪಕ್ಷದ ಕಾರ್ಯಕ್ರಮವಲ್ಲ. ಸಮಾಜದಲ್ಲಿ ಶೋಷಿತರು ಸಿಂಹಪಾಲಿದ್ದಾರೆ. ಶತಶತಮಾನಗಳಿಂದ ಶೋಷಣೆಗೊಳಗಾಗಿದ್ದಾರೆ. ಶತಮಾನಗಳಿಂದ ದೌರ್ಜನ್ಯಕ್ಕೊಳಗಾಗಿದ್ದಾರೆ. ಸಮಾಜದಲ್ಲಿ ಶೋಷಣೆ ನಡೆಯುತ್ತಲೇ ಇದೆ. ಇದಕ್ಕೆ ಕಾರಣ ಜಾತಿ ವ್ಯವಸ್ಥೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಹಾಗಾಗಿ ಸಮಾಜದಲ್ಲಿ ಅಸಮಾನತೆ ಕಾಣುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com