ಕುತೂಹಲ ಕೆರಳಿಸಿದ ಡಿಕೆ.ಶಿವಕುಮಾರ್-ಸೂರಜ್ ರೇವಣ್ಣ ಭೇಟಿ

ಎಚ್‌.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್‌ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶನಿವಾರ ಭೇಟಿ ಮಾಡಿದ್ದು, ಈ ಭೇಟಿ ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಡಿಕೆ.ಶಿವಕುಮಾರ್-ಸೂರಜ್ ರೇವಣ್ಣ
ಡಿಕೆ.ಶಿವಕುಮಾರ್-ಸೂರಜ್ ರೇವಣ್ಣ
Updated on: 

ಬೆಂಗಳೂರು: ಎಚ್‌.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್‌ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶನಿವಾರ ಭೇಟಿ ಮಾಡಿದ್ದು, ಈ ಭೇಟಿ ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಬೆಳಿಗ್ಗೆ ಬಂದ ಸೂರಜ್‌ ಜೊತೆ ಶಿವಕುಮಾರ್‌ ಗೌಪ್ಯವಾಗಿ ಮಾತುಕತೆ ನಡೆಸಿದರು. ಇಬ್ಬರು ನಾಯಕರ ಈ ಭೇಟಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.

ಆದರೆ, ಊಹಾಪೋಹಗಳಿಗೆ ಸೂರಜ್ ಅವರು ತೆರೆ ಎಳೆದಿದ್ದು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಜಿಲ್ಲೆಯ ಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳ ಕುರಿತ ಅವರನ್ನು ಭೇಟಿ ಮಾಡುವುದು ಅಗತ್ಯವಿದೆ. ಹೀಗಾಗಿ ಭೇಟಿ ಮಾಡಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com