ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 15 ವರ್ಷದ ಬಾಲಕಿ ಬಲಿ

ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ  ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು:  ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ  ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.

ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. ಸಂಜೆ ಅಂತ್ಯಕ್ರಿಯೆ ನಡೆಯಿತು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ ನಗರದಲ್ಲಿ ಶನಿವಾರ ಮತ್ತೆ ಮೂರು ರಸ್ತೆ ಅಪಘಾತಗಳು ವರದಿಯಾಗಿವೆ. ಒಂದು ಘಟನೆಯಲ್ಲಿ, 35 ವರ್ಷದ ಇಶಾಕ್ ಮಾಂಜಿ ಅವರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ  ಸಾವನ್ನಪ್ಪಿದ್ದಾರೆ. ಹೆಣ್ಣೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 11.15ರ ಸುಮಾರಿಗೆ ಘಟನೆ ನಡೆದಿದೆ.

ಜೆ.ಪಿ.ನಗರದ ನಿವಾಸಿ ಅರುಣ್ ನೈಸ್ ರಸ್ತೆ ಸೇತುವೆಯಿಂದ ಅಂಜನಾಪುರ ರಸ್ತೆ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬಿಹಾರದ 32 ವರ್ಷದ ಸುಜಿತ್ ಶಾ ಅವರ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಮೃತರು ಕೂಲಿ ಕೆಲಸ ಮಾಡಿಕೊಂಡು ಚಿಕ್ಕನಾಗಮಂಗಲದಲ್ಲಿ ವಾಸವಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com