ರಾಷ್ಟ್ರಪತಿಗಳ ಬಗ್ಗೆ ಏಕವಚನ ಪ್ರಯೋಗ: ಸಿಎಂ ಸಿದ್ದರಾಮಯ್ಯ ವಿಷಾದ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಿದ್ದಾರೆ. ರಾಷ್ಟ್ರದ ಪ್ರಥಮ ಪ್ರಜೆ ಕುರಿತು ಏಕವಚನ ಬಳಸಿದ್ದಕ್ಕೆ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. 
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಿದ್ದಾರೆ. ರಾಷ್ಟ್ರದ ಪ್ರಥಮ ಪ್ರಜೆ ಕುರಿತು ಏಕವಚನ ಬಳಸಿದ್ದಕ್ಕೆ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. 

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು, ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಬೋಧಿಸಿದೆ. 

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡ ಏಕವಚನದಲ್ಲಿ ಸಂಬೋಧಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ನಡೆದ ಘಟನೆಯೇನು?: ಚಿತ್ರದುರ್ಗದಲ್ಲಿ ನಿನ್ನೆ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಷಿತ ಸಮುದಾಯಕ್ಕೆ ಸೇರಿದವಳು, ಸಂವಿಧಾನ ರಕ್ಷಕರೆಂದು ಕರೆಸಿಕೊಳ್ಳುವ ಬಿಜೆಪಿಯವರು ಅವಳನ್ನು ನೂತನ ಸಂಸತ್‌ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ, ನಾನು ಹಿಂದೂ ವಿರೋಧಿ ಎನ್ನುತ್ತಾರೆ. ನಾನು ಯಾರ ವಿರೋಧಿ ಕೂಡ ಅಲ್ಲ, ನಾನು ಸಮಾಜಪರ ಇರುವವನು ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com