2ನೇ ಬಾರಿ ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆ; ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬಹುನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮಿಕ್ಷೆ(ಜಾತಿ ಗಣತಿ) ವರದಿ ಸದ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಏಕೆಂದರೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ...
ಜಯಪ್ರಕಾಶ್ ಹೆಗ್ಡೆ
ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಬಹುನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮಿಕ್ಷೆ(ಜಾತಿ ಗಣತಿ) ವರದಿ ಸದ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಏಕೆಂದರೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿ ವಿಸ್ತರಣೆ ಮಾಡಿದೆ. ಹೀಗಾಗಿ ಜಾತಿ ಗಣತಿ ವರದಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ಫೆಬ್ರವರಿ 15 ರವರೆಗೂ ವಿಸ್ತರಣೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಕಳೆದ ನವೆಂಬರ್‌ನಲ್ಲೇ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿತ್ತು. ಆದರೆ ರಾಜ್ಯ ಸರ್ಕಾರ ಜನವರಿ 31 ರವರೆಗೂ ಅವರ ಅವಧಿಯನ್ನು ವಿಸ್ತರಣೆ ಮಾಡಿತ್ತು. ಇದೀಗ ಆಯೋಗದಿಂದ ವರದಿ‌ ಸ್ವೀಕರಿಸುವ ನಿಟ್ಟಿನಲ್ಲಿ, ಫೆಬ್ರವರಿ 15 ರವರೆಗೂ ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ವಿಸ್ತರಿಸಲಾಗಿದೆ.

ನಿನ್ನೆಯೆಷ್ಟೇ ಚಿತ್ರದುರ್ಗದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕರಿಸಲಿದೆ ಎಂದು ಹೇಳಿದ್ದರು. ಇದರ ಬೆನಲ್ಲೇ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com