ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಸಂಬಂಧ ಸುತ್ತೋಲೆ ಶಿಕ್ಷಣ ಇಲಾಖೆ ಜನವರಿ 8, 2024 ರಂದು ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿ ಪೋಷಕರು, ಶಿಕ್ಷಕರು ಮತ್ತು ಅಧಿಕಾರಿಗಳು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರಿಗೆ ಕಾಯಿದೆಗಳ ಬಗ್ಗೆ ಸೂಕ್ತ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪೋಕ್ಸೋ ಕಾಯ್ದೆಯ ಕುರಿತಾದ ಎಲ್ಲಾ ಅಂಶಗಳ ಕುರಿತು ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ, ಬಿಡುವಿನ ವೇಳೆಯಲ್ಲಿ, ಸಂದರ್ಭಾನುಸಾರ ಬೋಧನಾ ಅವಧಿಗಳಲ್ಲಿ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ರಾಷ್ಟ್ರೀಯ ಹಬ್ಬಗಳ ಸಂದರ್ಭಗಳಲ್ಲಿ, ಪೋಷಕರ ಸಭೆಗಳಲ್ಲಿ, ತಾಯಂದಿರ ಸಭೆಗಳಲ್ಲಿ, ಸಮುದಾಯದತ್ತ ಶಾಲೆ ಕಾರ್ಯಕ್ರಮಗಳಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹಾಗೂ ಶಾಲಾ ಆವರಣದಲ್ಲಿ, ಶಾಲಾ ಸಭಾಂಗಣದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತೆರೆದ ಮನೆ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ತಿಗಳು, ಶಿಕ್ಷಕರು. ಪೋಷಕರು ಸೇರಿದಂತೆ ಎಲ್ಲಾ ಪಾಲುದಾರರಿಗೆ ಜಾಗೃತಿ ಮೂಡಿಸುವಂತೆ ಇಲಾಖೆಯ ಎಲ್ಲಾ ಶಾಲಾ ಉಸ್ತುವಾರಿ ಮತ್ತು ಮೇಲ್ವಿಚಾರಣಾ ಅಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

“ಎಲ್ಲಾ ಶಾಲೆಗಳಲ್ಲಿ ಪೊಲೀಸರ ಸಹಯೋಗದೊಂದಿಗೆ ಪೋಕ್ಸೋ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಕಡ್ಡಾಯವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿದಾಗ ಮಕ್ಕಳೊಂದಿಗೆ ಮಾತನಾಡಿ, ಜಾಗೃತಿ ಮೂಡಿಸಬೇಕು. ಮಕ್ಕಳು ಭಯಪಡದಂತೆ ಜಾಗೃತಿ ಮೂಡಿಸಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಇತರ ದೌರ್ಜನ್ಯಗಳನ್ನು ಮಕ್ಕಳ ಸ್ನೇಹಿ ಭಾಷೆಯಲ್ಲಿ ಚರ್ಚಿಸಬೇಕಿದೆ. ಪೊಲೀಸರು ಮತ್ತು ಶಾಲೆಗಳು ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕಿದೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ನಿರ್ದೇಶಕ ನಾಗಸಿಂಹರಾವ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com