ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಯುವಕನ ಬಂಧನ

ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ತುಮಕೂರಿನಲ್ಲಿ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ತುಮಕೂರಿನಲ್ಲಿ ಬಂಧಿಸಿದ್ದಾರೆ.

ತುಮಕೂರಿನ ತ್ರಯಂಬಕೇಶ್ವರಿ ನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐ.ಡಿ.ಹಳ್ಳಿ ನಿವಾಸಿ 23 ವರ್ಷದ ಆರೋಪಿ ಪವನ್ ಎಂಬಾತ ಬಾಲಕಿ ತನ್ನ ಮನೆಯ ಮುಂದೆ ಒಂಟಿಯಾಗಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಬಾಲಕಿ ನಿವಾಸದಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ್ದ ಪವನ್ ಬಾಲಕಿಯನ್ನು ಬಲವಂತವಾಗಿ ಎತ್ತಿಕೊಂಡು ಒಳಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.  

ಈ ವೇಳೆ ಬಾಲಕಿ ಕಿರುಚಾಡಿ ಸಹಾಯಕ್ಕಾಗಿ ಕೂಗಿಕೊಂಡಿದ್ದು, ನೆರೆಹೊರೆಯವರು ಮತ್ತು ದಾರಿಹೋಕರು ಬಾಲಕಿಯ ಸಹಾಯಕ್ಕೆ ಧಾವಿಸಿ ಆರೋಪಿಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.  ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅತನನ್ನು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ಥ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕುಡುಕನಾದ ಆರೋಪಿ ಪವನ್ ಪಟ್ಟಣದ ಬೀದಿಗಳಲ್ಲಿ ಓಡಾಡಿಕೊಂಡು ಒಂಟಿಯಾಗಿ ಆಟವಾಡುತ್ತಿದ್ದ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದು, ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com