ಬೆಂಗಳೂರಿನ ಮಲ್ಲೇಶ್ವರದಲ್ಲಿ 1.11 ಕೋಟಿ ರೂ ವೆಚ್ಚದಲ್ಲಿ ರಾಜೀವ್ ಗಾಂಧಿ ಪ್ರತಿಮೆ ಸ್ಥಾಪನೆ!

ನಗರದ ಹೃದಯ ಭಾಗದಲ್ಲಿರುವ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅಂದಾಜು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆಯೆತ್ತಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅಂದಾಜು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆಯೆತ್ತಲಿದೆ. ಕಾಂಕ್ರೀಟ್ ಪ್ರತಿಮೆಗೆ ಬದಲಾಗಿ ಹೊಸ ಪ್ರತಿಮೆ ನಿರ್ಮಾಣವಾಗಲಿದೆ. ಸುಭಾಷ್ ನಗರ ಜಂಕ್ಷನ್ ಅಥವಾ ರಾಜೀವ್ ಗಾಂಧಿ ಚೌಕ್ ಎಂದು ಕರೆಯಲಾಗುವ, ಈ ಸ್ಥಳವು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತದೆ.

15ನೇ ಹಣಕಾಸು ಆಯೋಗದ ಕಾರ್ಯಕ್ರಮದಡಿ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೆತ್ತಿಕೊಂಡ 25 ಜಂಕ್ಷನ್‌ಗಳಲ್ಲಿ ಸುಭಾಷ್ ನಗರವೂ ಒಂದಾಗಿದ್ದು, ಪ್ರತಿಮೆಯ ವೆಚ್ಚವನ್ನು ಬಿಬಿಎಂಪಿ ಸ್ವಂತವಾಗಿ ಭರಿಸಲಿದೆ. ಈ ಹಿಂದೆ ಜಂಕ್ಷನ್‌ನಲ್ಲಿ ಸ್ಥಾಪಿಸಲಾಗಿದ್ದ ಕಾಂಕ್ರೀಟ್ ಮೂರ್ತಿಯನ್ನು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿಯನ್ನು ಪಾಲಿಕೆಯ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್‌ಗೆ ವಹಿಸಲಾಗಿದೆ – ಸಿಂಗಲ್ ಬಿಡ್ಡರ್ ಆಗಿದ್ದ ಕಲ್ಯಾಣ್ ಇನ್‌ಫ್ರಾ ಪ್ರಾಜೆಕ್ಟ್ಸ್‌ಗೆ ನೀಡಲಾಗಿದೆ.

ಇದಕ್ಕೆ ಬಿಜೆಪಿಯ ಹಲವು ನಾಯಕರು ಟೀಕಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ. ಆದರೆ ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ಅವಮಾನಿಸಿದರೂ ಅವರ ರಾಜಕೀಯ ಯಜಮಾನರನ್ನು ಮೆಚ್ಚಿಸಲು ಎಲ್ಲಾ ಹಣ ಲಭ್ಯವಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com