ಈ ಬಾರಿ 3.8 ಲಕ್ಷ ಕೋಟಿ ರು. ಬಜೆಟ್ ಮಂಡಿಸಿ, ಟೀಕಾಕಾರರ ಬಾಯಿ ಮುಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಫೆಬ್ರವರಿ 16 ರಂದು ಮಂಡಿಸಲಿರುವ 2024-25 ನೇ ಸಾಲಿನ ರಾಜ್ಯ ಬಜೆಟ್ ಗಾತ್ರವು ಸುಮಾರು 3.8 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 2023-24 ರ  ಬಜೆಟ್‌ಗೆ ಹೋಲಿಸಿದರೆ 50,000 ಕೋಟಿ ರೂಪಾಯಿಗಳಷ್ಟು ಹೆಚ್ಚಾಗುತ್ತದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ತುಮಕೂರು: ಫೆಬ್ರವರಿ 16 ರಂದು ಮಂಡಿಸಲಿರುವ 2024-25 ನೇ ಸಾಲಿನ ರಾಜ್ಯ ಬಜೆಟ್ ಗಾತ್ರವು ಸುಮಾರು 3.8 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 2023-24 ರ  ಬಜೆಟ್‌ಗೆ ಹೋಲಿಸಿದರೆ 50,000 ಕೋಟಿ ರೂಪಾಯಿಗಳಷ್ಟು ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ನನ್ನ ಸರ್ಕಾರದಲ್ಲಿ ಹಣವಿಲ್ಲ ಮತ್ತು ದಿವಾಳಿಯಾಗಿದೆ ಎಂದು ಬಿಜೆಪಿ ಟೀಕಿಸುತ್ತಿದೆ. ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಅಸಾಧ್ಯ, ಹಾಗೆ ಮಾಡಿದರೆ ಸರ್ಕಾರ ದಿವಾಳಿಯಾಗುತ್ತದೆ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ ನಾನು 3.7 ಲಕ್ಷ ಕೋಟಿಯಿಂದ 3.8 ಲಕ್ಷ ಕೋಟಿಯವರೆಗೆ ಬಜೆಟ್ ಮಂಡಿಸುತ್ತೇನೆ. ಹಣವಿಲ್ಲದಿದ್ದರೆ, ಬಜೆಟ್‌ನ ಗಾತ್ರ ಇಷ್ಟು ಹೇಗೆ ಆಗಲಿದೆ? ಪ್ರಶ್ನಿಸಿದರು.

ತುಮಕೂರು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು 30,125 ಫಲಾನುಭವಿಗಳಿಗೆ 697.27 ಕೋಟಿ ಮೌಲ್ಯದ ಸವಲತ್ತುಗಳನ್ನು ವಿತರಿಸಿದ ನಂತರ ಮಾತನಾಡಿದರು.  ನಾವು ಮಾಡುತ್ತಿರುವ ಕೆಲಸ ತಮ್ಮ ಟೀಕಾಕಾರರು ಮತ್ತು ವಿರೋಧ ಪಕ್ಷಗಳಿಗೆ ವಿಶೇಷವಾಗಿ ಬಿಜೆಪಿಗೆ ಉತ್ತರವಾಗಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ತಕ್ಕ ಪ್ರತ್ಯುತ್ತರ ನೀಡುವಂತೆ ಅವರು ಖಾತ್ರಿ ಯೋಜನೆಗಳ ಫಲಾನುಭವಿಗಳು ಮತ್ತು ಮಹಿಳೆಯರಿಗೆ ಮನವಿ ಮಾಡಿದರು. ಐದು ಖಾತರಿ ಯೋಜನೆಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ ಎಂದು ಜನರನ್ನು ದಾರಿ ತಪ್ಪಿಸುವವರಿಗೆ ಈ ಘಟನೆ ಉತ್ತರವಾಗಿದೆ ಎಂದು ಅವರು ಹೇಳಿದರು.

ನಾವು ಎಲ್ಲಾ ಐದು ಖಾತರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳು ಹೇಳುವವರಿಗೆ ತಕ್ಕ ಉತ್ತರ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಬರ ಪರಿಹಾರ ಕಾಮಗಾರಿಗಳಿಗೆ ಎನ್‌ಡಿಆರ್‌ಎಫ್‌ನಿಂದ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದರು. ರಾಜ್ಯ ಸರ್ಕಾರವು 29,28,910 ರೈತರಿಗೆ ಇನ್‌ಪುಟ್ ಸಬ್ಸಿಡಿಯಾಗಿ ತಲಾ 2,000 ರೂ.ಗಳ ಮೊದಲ ಕಂತಿನಲ್ಲಿ 555 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಅವರು ಹೇಳಿದರು. ಅನುದಾನದ ಕೊರತೆಯಿಂದ ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ. ವಾಸ್ತವವಾಗಿ ಅನೇಕ ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಿಎಂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com