ಬೆಂಗಳೂರು: ರಾಜ್ಯ ಸರ್ಕಾರ, ರಾಜ್ಯದ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆಎಸ್ ರವೀಂದ್ರನಾಥ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಪ್ರಭಾರಿ ನಿರ್ದೇಶಕರನ್ನಾಗಿ ಡಾ. ರವಿಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆ ಪ್ರಭಾರಿ ಆಗಿ ಮುಂದುವರೆಯಲಿದ್ದು, ಶಾಶ್ವತ ನಿರ್ದೇಶಕರ ಆಯ್ಕೆಗೆ ಸರ್ಕಾರ ಹಿಂದೇಟು ಹಾಕಿದೆ.
69 ವರ್ಷದ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Advertisement