ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಬಡವರ ಕಲ್ಯಾಣಕ್ಕೆ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಬಡವರ ಕಲ್ಯಾಣಕ್ಕೆ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತೇವೆಯೇ ಹೊರತು ನಿಲ್ಲಿಸುವ ಪ್ರಶ್ನೆಯಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು. ನಿಮಗೆ ಅಕ್ಷತೆ ಬೇಕಾ ಅಥವಾ ಗ್ಯಾರಂಟಿಗಳು ಬೇಕಾ ಎಂಬ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಟೀಕೆಗೆ ಪ್ರತಿಕ್ರಿಯೆಯಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತಾ ಮುಂದುವರಿಸಲಾಗುವುದು ಎಂದರು. 

ಕೇಂದ್ರ ಬಜೆಟ್ ನಂತರ ಪ್ರತಿಕ್ರಿಯೆ: ಕೇಂದ್ರ ಸರ್ಕಾರ ನಾಳೆ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಈ ಬಗ್ಗೆ ನಾಳೆಯೇ ನಾನು ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಅಧಿಕಾರಿಗಳ ಸಲಹೆ, ಸೂಚನೆ ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com