Fire Accident: ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ, 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿವೆ. ಒಳಗಿದ್ದ ವಸ್ತುಗಳು ಆಹುತಿಯಾಗಿವೆ. ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಅಂಗಡಿಗಳಿಗೆ ಬೆಂಕಿ ಹೊತ್ತುಕೊಂಡಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಆದರೆ ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ. ಹಾಗಾಗಿ ಎಲ್ಲೆಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬುದು ಗೊತ್ತಾಗದಂತಾಗಿದೆ. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗಿದೆ. ವಿಷಯ ತಿಳಿದು ದೊಡ್ಡ ಸಂಖ್ಯೆಯಲ್ಲಿ ಜನರು ಗಾಂಧಿ ಬಜಾರ್‌ ಬಟ್ಟೆ ಮಾರುಕಟ್ಟೆ ಬಳಿ ಸೇರಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com