
ಬೆಂಗಳೂರು: ನಗರದ ಕಮಲಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಈ ಘಟನೆ ನಡೆದಿದ್ದು, ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯ ತಂದೆ ಸೋಮವಾರ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿದೆ. ಸಂಬಂಧಪಟ್ಟ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕಮಲಾನಗರ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದು, ಶಿಕ್ಷಕನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಪಿಸಿಆರ್ ಸದಸ್ಯ ಶಶಿಧರ್ ಕೊಸಂಬೆ ಹೇಳಿದ್ದಾರೆ.
Advertisement