ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನಿಂದ ನಕಲಿ ಸಂಸ್ಥೆಗಳ ಖಾತೆಗೆ 94.73 ಕೋಟಿ ರೂ. ವರ್ಗಾವಣೆ

ಪ್ರಕರಣದಲ್ಲಿ ಆರೋಪಿ ನಂ.10 ಎಂದು ಹೆಸರಿಸಲಾದ ನಾಗರಾಜ್ ನಿಗಮದಿಂದ 94.73 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಬಹು ನಕಲಿ ಕಂಪನಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು ಎಂಬ ಆರೋಪವಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಕುರಿತು ಅಪರಾಧ ತನಿಖಾ ಇಲಾಖೆ (CID) ನಡೆಸುತ್ತಿರುವ ತನಿಖೆಯಲ್ಲಿ ಆರೋಪಿ ನೇಕುಂಟಿ ನಾಗರಾಜ್ (46ವ) ಎಂಬಾತ ಇಲಾಖೆಯ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತನಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಆರೋಪಿ ನಂ.10 ಎಂದು ಹೆಸರಿಸಲಾದ ನಾಗರಾಜ್ ನಿಗಮದಿಂದ 94.73 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಬಹು ನಕಲಿ ಕಂಪನಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು ಎಂಬ ಆರೋಪವಿದೆ.

ನಾಗರಾಜ್ ಅವರನ್ನು ಜೂನ್ 4 ರಂದು ಸಿಐಡಿ ಬಂಧಿಸಿ, ಜೂನ್ 18 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಅವರು ನಿಗಮದ ವ್ಯವಹಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಮತ್ತು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾದ ಹಣದ ಬದಲಾಗಿ ಕೆಲವು ಆಭರಣ ಅಂಗಡಿಗಳಿಂದ ಚಿನ್ನವನ್ನು ಸಂಗ್ರಹಿಸಿದ್ದರು.

ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಾಗ ಬೆಳಕಿಗೆ ಬಂದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸತ್ಯನಾರಾಯಣ್ ಅವರೊಂದಿಗೆ ಕೈಜೋಡಿಸಿದ್ದಾರೆ ಎಂಬ ಆರೋಪವಿದೆ.

ನಾಗರಾಜ್ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಸಿಐಡಿ, ನಾಗರಾಜ್ ರಿಂದ ಚಿನ್ನಾಭರಣಗಳನ್ನು ಯಾರು ಪಡೆದುಕೊಂಡಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಹೇಳಿದೆ. ಅವರು ಕಾರ್ಪೊರೇಷನ್ ಖಾತೆಯಿಂದ ಡ್ರಾ ಮಾಡಿದ ಹಣ ಮತ್ತು ಚಿನ್ನವನ್ನು ಇನ್ನೂ ಗುರುತಿಸಲಾಗದ ಅಪರಿಚಿತ ವ್ಯಕ್ತಿಗಳ ಖಾತೆಗಳಿಗೆ ಜಮಾ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಾಂದರ್ಭಿಕ ಚಿತ್ರ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ

ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಮತ್ತು ಖಾತೆ ಅಧಿಕಾರಿ ಪರಶುರಾಮ್ ಅವರ ಮೇಲೆ ಸಚಿವರ ಮೂಲಕ ಒತ್ತಡ ಹೇರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಸಂತನಗರ ಶಾಖೆಯಲ್ಲಿರುವ ನಿಗಮದ ಬ್ಯಾಂಕ್ ಖಾತೆಯಿಂದ ಎಂಜಿ ರಸ್ತೆ ಶಾಖೆಗೆ ಹಣ ಹೇಗೆ ವರ್ಗಾವಣೆಯಾಗಿದೆ ಎಂದು ಸಿಐಡಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಸೀಲುಗಳು, ನಕಲಿ ಸಹಿ ಮತ್ತು ಲೆಟರ್‌ಹೆಡ್‌ಗಳನ್ನು ಪಡೆಯಲು ಮಧ್ಯಸ್ಥಿಕೆ ವಹಿಸಿದವರು ಯಾರು ಎಂದು ತನಿಖೆ ನಡೆಸುತ್ತಿದೆ ಎಂದು ಸಿಐಡಿ ತಿಳಿಸಿದೆ.

ಸಾಂದರ್ಭಿಕ ಚಿತ್ರ
ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ BBMPಯಲ್ಲೂ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು; ಪಾಲಿಕೆಗೆ ಲೋಕಾಯುಕ್ತ ಪತ್ರ!

ರಾಜಕೀಯ ಸೇರಿದ್ದ ನಾಗರಾಜ್: ನಾಗರಾಜ್ 2013ರ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧಿಸಿದ್ದರು, ನಾಗರಾಜ್ ಅವರು ನೇರವಾಗಿ ನಿಗಮದಿಂದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಿ ಸಚಿವರ ಆಪ್ತ ಮತ್ತು ಸಂಬಂಧಿ ಎಂದು ಹೇಳಿಕೊಂಡು ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡುವುದರಲ್ಲಿ ಯಾವುದೇ ಪಾತ್ರವಿಲ್ಲದಿದ್ದರೂ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಸದ್ಯ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಳ್ಳುತ್ತಿರುವ ನಾಗರಾಜ್ 2013ರಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಆರ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com