ಮುಡಾ ನಿವೇಶನ ಅಕ್ರಮ ಆರೋಪ: ನಿಯಮ ಬಾಹಿರ ನಿವೇಶನ ವರ್ಗಾವಣೆ ಅಲ್ಲ; ಜಮೀನನ್ನು ಬಾಮೈದ ನನ್ನ ಪತ್ನಿಗೆ ಗಿಫ್ಟ್ ನೀಡಿದ್ದು- ಸಿಎಂ

ಸಿಎಂ ಸಿದ್ದರಾಮಯ್ಯನವರು ತಮ್ಮ ಧರ್ಮ ಪತ್ನಿ ಹೆಸರಿನಲ್ಲಿ ನಿಯಮ ಬಾಹಿರವಾಗಿ ಮುಡಾ ನಿವೇಶನ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಮ್ಮ ಧರ್ಮ ಪತ್ನಿ ಹೆಸರಿನಲ್ಲಿ ನಿಯಮ ಬಾಹಿರವಾಗಿ ಮುಡಾ ನಿವೇಶನ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. 1 ಎಕರೆ 15 ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಈ ಜಮೀನನ್ನು ಪತ್ನಿಯ ಸೋದರ ಬಾಮೈದ ತೆಗೆದುಕೊಂಡು ಅರಿಶಿನ-ಕುಂಕಮ ರೀತಿಯಲ್ಲಿ ಉಡುಗೊರೆಯಾಗಿ ನನ್ನ ಪತ್ನಿಗೆ ಕೊಟ್ಟಿದ್ದಾನೆ. ನಾನು ಅಧಿಕಾರದಲ್ಲಿದ್ದಾಗ ಜಮೀನು ಖರೀದಿಸಿದ್ದಲ್ಲ ಎಂದರು.

ಕಾನೂನು ಪ್ರಕಾರ 50:50 ಜಮೀನು ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟ್ ಮಾಡಿ ಹಂಚಿಬಿಟ್ಟರು. ಹಂಚಿದ ಮೇಲೆ ನಮಗೆ ಜಮೀನು ಇಲ್ಲದೆ ಹಾಗೆ ಆಯ್ತು. ಅದಕ್ಕೆ ಮುಡಾದವರು ನಿಮಗೆ 50:50 ಅನುಪಾತದಲ್ಲಿ ಜಮೀನು ಕೊಡುತ್ತೇವೆ ಅಂದರು. ಅದಕ್ಕೆ ಬೇರೆ ಕಡೆ ಜಮೀನು ಕೊಟ್ಟರು, ಇದು ತಪ್ಪಾ, ಕಾನೂನಿನ ಪ್ರಕಾರವೇ ನಮಗೆ ಜಮೀನು ಹಂಚಿದ್ದಾರೆ ಎಂದರು.

ನಮ್ಮ ಸರ್ಕಾರದಲ್ಲಿ ಸೈಟು ಹಂಚಿಕೆ ಆಗಿಲ್ಲ: ಮಹದೇವಪ್ಪ

ಹಿಂದೆ ಆಗಿರುವ ಬಗ್ಗೆ ಮಾಹಿತಿ ಇದೆ, ನಮ್ಮ ಸರ್ಕಾರ ಬಂದ ಮೇಲೆ 50:50 ಅನುಪಾತದಲ್ಲಿ ಸೈಟು ಹಂಚಿಕೆ ಆಗಿಲ್ಲ. ಅಧಿಕಾರ ವರ್ಗಾವಣೆ ಒಂದು ಪ್ರಕ್ರಿಯೆ ಅಷ್ಟೇ. ತನಿಖೆ ವರದಿ ಬಂದ ಮೇಲೆ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಕಾನೂನಾತ್ಮಕ ಶಿಕ್ಷೆ ಆಗುತ್ತದೆ ಎಂದು ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯ
ಗೋಲ್ಮಾಲ್ ಸಿಎಂ ಅವರಿಂದ ಮೈಸೂರು MUDAದಲ್ಲಿ 4,000 ಕೋಟಿ ರೂ. ಗುಳುಂ: ಆರ್. ಅಶೋಕ್ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಮಾತನಾಡಿ, 2004ರಲ್ಲಿ ಕೆಸರೆ ಗ್ರಾಮದ ಸರ್ವೆ ನಂ.464ರಲ್ಲಿ 3.16 ಎಕರೆ, ಸರ್ವೆ ನಂ.464ರಲ್ಲಿ 3.16 ಎಕರೆ ಮಲ್ಲಿಕಾರ್ಜುನ್​ ಎಂಬುವರಿಗೆ ಸೇರಿದೆ. 1988ರಲ್ಲಿ ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಜಾಗವನ್ನು ದಾನ ಪತ್ರ ಮೂಲಕ ಕೊಟ್ಟಿದ್ದಾರೆ. 2007ರಲ್ಲಿ 50:50 ಅನುಪಾತದಲ್ಲಿ ಕಾನೂನಿನ ಮೂಲಕ ಪರಿಹಾರವಾಗಿ 71,457 ಚದರ ಅಡಿ ಜಾಗ ಕೊಡಬೇಕಿತ್ತು. ಆದರೆ, 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಎಂದು ತಿಳಿಸಿದರು.

ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಕೊಟ್ಟಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಷ್ಟವೇ ಆಗಿದೆ. ಸಿಎಂ ಪತ್ನಿ ಪಾರ್ವತಿ ಅವರಿಗೆ 2021ರಲ್ಲಿ ಜಾಗ ಕೊಡಲಾಗಿದೆ. ಆಗ ಬಿಜೆಪಿ ಸರ್ಕಾರವೇ ಇತ್ತು, ಮುಡಾ ಪುಕ್ಕಟೆಯಾಗಿ ಕೊಟ್ಟಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com