
ದಾವಣಗೆರೆ: ದಾವಣಗೆರೆ ನಗರದ ಎಸ್‌ಒಜಿ ಕಾಲೋನಿಯಲ್ಲಿ ಮಂಗಳವಾರ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾಗಿವೆ.
ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಲಲಿತಮ್ಮ(50), ಮಲ್ಲೇಶಪ್ಪ (60), ಪಾರ್ವತಮ್ಮ(45), ಸೌಭಾಗ್ಯ(36) ಮತ್ತು ಪ್ರವೀಣ್ (35) ಎಂದು ಗುರುತಿಸಲಾಗಿದೆ.
ಐವರಿಗೂ ಶೇ. 50 ರಿಂದ 60 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಮೊದಲು ಸರ್ಕಾರಿ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಡುಗೆ ಮಾಡುವಾಗ ಎಲ್ ಪಿಜಿ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Advertisement