ಹಣಕಾಸು ವಿವಾದ: ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಹಣಕಾಸು ವಿಚಾರ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹಣಕಾಸು ವಿಚಾರ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಕಮ್ಮನಹಳ್ಳಿ ಸಮೀಪದ ನಿವಾಸಿ ಅಜಿತ್ (26) ಕೊಲೆಯಾದ ದುರ್ದೈವಿ. ಫೈನಾನ್ಷಿಯರ್‌ಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ಪಡೆದಿದ್ದ ಅಜಿತ್, ಸಾಲವನ್ನು ಹಿಂದಿರುಗಿಸುತ್ತಿರಲಿಲ್ಲ. ಇದೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಹತ್ಯೆಯಾದ ಅಜಿತ್ ಕಾಕ್ಸ್ ಟೌನ್ ಬಳಿಯ ದೊಡ್ಡಕುಂಟೆ ನಿವಾಸಿ.

ಸಂಗ್ರಹ ಚಿತ್ರ
ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವರ ಮನೆಯ ಸಮೀಪ ಕಾದು ಕುಳಿತಿದ್ದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಪುಲಕೇಶಿನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com