ಚನ್ನಪಟ್ಟಣ ಮತ್ತೊಂದು ಬೆಂಗಳೂರು ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಾವು ಎಲ್ಲಿಗೆ ಸೇರಿದವರು ಎಂಬ ಮಾಹಿತಿ ಬೇಕಾದರೆ ಪಠ್ಯ ಪುಸ್ತಕಗಳನ್ನು ತೆಗೆದುನೋಡಿ. ಹೊಸಕೋಟೆ, ದೇವನಹಳ್ಳಿ, ಮಾಗಡಿ, ಕನಕಪುರ ಹೀಗೆ ನಾವೆಲ್ಲ ಬೆಂಗಳೂರಿಗೆ ಸೇರಿದವರು ಎಂದು ಪುನರುಚ್ಚರಿಸಿದರು.
ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್
ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್
Updated on

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ಡಿ.ಕೆ. ಶಿವಕುಮಾರ್ ಮುಂದಾಳತ್ವದಲ್ಲಿ ಬೆಂಗಳೂರು ಆಗಲಿದೆ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತುಂಬಲು ನಾನು ಬಂದಿದ್ದೇನೆ" ಎಂದು ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣ ಮತ್ತು ಫರಾನ ಶಾಲೆಯ ಆವರಣದಲ್ಲಿ ನಡೆದ 'ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮ ಹಾಗೂ ನಂತರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ನಾವೆಲ್ಲ ಬೆಂಗಳೂರು ಜಿಲ್ಲೆಯವರು. ನಾವೆಲ್ಲ ಇದ್ದಿದ್ದು ಬೆಂಗಳೂರಿನಲ್ಲಿ, ಈಗಲೂ ಇರುವುದು ಬೆಂಗಳೂರಿನಲ್ಲಿ. ಇರುವ ಹೆಸರನ್ನು ನಾವೇಕೆ ಕಳೆದುಕೊಳ್ಳಬೇಕು. ಇನ್ನೆರಡು ದಿನ ಕಾಯಿರಿ" ಎಂದರು.

ನಾವು ಎಲ್ಲಿಗೆ ಸೇರಿದವರು ಎಂಬ ಮಾಹಿತಿ ಬೇಕಾದರೆ ಪಠ್ಯ ಪುಸ್ತಕಗಳನ್ನು ತೆಗೆದುನೋಡಿ. ಹೊಸಕೋಟೆ, ದೇವನಹಳ್ಳಿ, ಮಾಗಡಿ, ಕನಕಪುರ ಹೀಗೆ ನಾವೆಲ್ಲ ಬೆಂಗಳೂರಿಗೆ ಸೇರಿದವರು ಎಂದು ಪುನರುಚ್ಚರಿಸಿದರು. ರಾಮನಗರ, ಚನ್ನಪಟ್ಟಣವನ್ನು ಅವಳಿ ನಗರಗಳನ್ನಾಗಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದರು, ಅವರು ಎರಡು ಬಾರಿ ಸಿಎಂ ಆಗಿದ್ದರು ಆಗ ಮಾಡಿದ್ರಾ? ನಾನು ಕೊಟ್ಟಮಾತನ್ನು ಮರೆಯುವವನಲ್ಲ. ಮಾತ್ನನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್
NDA ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?

ಚನ್ನಪಟ್ಟಣ ಕತ್ತಲಲ್ಲಿದೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿನ ಪಾಲಿಕೆ ಸದಸ್ಯರು ಕಾರ್ಯಕ್ರಮದಲ್ಲಿ ದೀಪ ಹಚ್ಚಿದ್ದಾರೆ. ಅವರ ಕೈ ಬಲಪಡಿಸಲು ನಾನು ಬಂದಿದ್ದೇನೆ" ಎಂದರು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವ ಮಾತಿನ ಅರ್ಥವನ್ನು ಮಾಧ್ಯಮಗಳು ಉತ್ತಮವಾಗಿ ಬರೆದಿವೆ. ಮತದಾರರು ನಮ್ಮವರನ್ನು ಶಾಸಕರನ್ನಾಗಿ ಮಾಡಿ ನಮ್ಮ ಕೈ ಬಲಪಡಿಸಬೇಕು. ಆಗ ಈ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ನನಗೆ ಶಕ್ತಿ ಸಿಗುತ್ತದೆ ಎಂದು ಮನವಿ ಮಾಡಿದರು.

ಈಗಾಗಲೇ 9 ಕಡೆಗಳಲ್ಲಿ ಈ ರೀತಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸರ್ಕಾರವನ್ನು ನಿಮ್ಮ ಮನೆ ಬಾಗಿಲಿಗೆ ತಂದು ನಿಮ್ಮ ಸೇವೆ ಮಾಡುತ್ತಿದ್ದೇವೆ. ಎಲ್ಲಾ ಇಲಾಖೆ, ಪಾಲಿಕೆ, ಪಂಚಾಯ್ತಿ ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದಾರೆ. ಈ ಕಾರ್ಯಕ್ರಮದ ಬಳಿಕ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇವೆ ಎಂದು ಹೇಳಿದರು. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಒಂದೇ ಬಾರಿ ಸರಿಪಡಿಸುತ್ತೇನೆ ಎಂದು ಹೇಳುತ್ತಿಲ್ಲ. ನಿಮಗೆ ಆಗಿರುವ ಅನ್ಯಾಯವನ್ನು ಹಂತ ಹಂತವಾಗಿ ಕಾನೂನು ವ್ಯಾಪ್ತಿಯಲ್ಲಿ ಸರಿಪಡಿಸುತ್ತೇವೆ ಎಂದರು.

ಸಾವಿರಾರು ಮಂದಿ ಮನೆ, ನಿವೇಶನ, ಸಾಲ ಸೌಲಭ್ಯ, ಪಿಂಚಣಿ ಸಮಸ್ಯೆ, ಖಾತೆ, ಪೋಡಿ, ರಸ್ತೆ ದುರಸ್ತಿ, ಒಳ ಚರಂಡಿ, ಕುಡಿಯುವ ನೀರು ಸೇರಿದಂತೆ ವಿವಿಧ ವಿಚಾರವಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಸ್ವಯಂ ಉದ್ಯೋಗ ಮಾಡುವವರಿಗೆ ಸಾಲ ಸೌಲಭ್ಯ ನೀಡಲಾಗುವುದು. ಎಲ್ಲಾ ಸಮುದಾಯಕ್ಕೂ ಸಮುದಾಯ ಭವನ, ಸ್ಮಶಾನ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com