ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು, ಮೊದಲ ಬಲಿ ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. 35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲ್ಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹೆಚ್ಚಾಗದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ಡ್ರೈ ಡೇ ಆಚರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ