
ಮಂಡ್ಯ: ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣ ಮಳೆಯಾಗುತ್ತಿದ್ದು, ಬರಡಾಗಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದೀಗ ಪ್ರಸಿದ್ಧ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳ ಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ.
ಕೊಡಗು, ಭಾಗಮಂಡಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕನ್ನಂಬಾಡಿ ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ. ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದೆ. ಕೆಆರ್‌ಎಸ್ ಡ್ಯಾಂಗೆ ಎರಡು ವಾರದಿಂದ ಸರಾಸರಿ 10 ಸಾವಿರ ಕ್ಯೂಸೆಕ್ ಒಳಹರಿವು ಆಗಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್ ಡ್ಯಾಂ ಇದೀಗ 100 ಅಡಿ ಭರ್ತಿಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: 100 ಅಡಿ ಭರ್ತಿಯಾದ ಜೀವನಾಡಿ ಕೆಆರ್ ಎಸ್; ರೈತರ ಮೊಗದಲ್ಲಿ ಮಂದಹಾಸಯಾಗಿದೆ.
ಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರ ಕೆಆರ್‌ಎಸ್ ತುಂಬಲಿದೆ.
ಕೆಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜುಲೈ 8 ರಿಂದ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುವುದಾಗಿಯು ಸಹ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರವಾಗಿ ಕೆಆರ್‌ಎಸ್ ಭರ್ತಿಯಾಗಲಿದೆ.
ಕೆಆರ್‌ಎಸ್ ಜಲಾಶಯ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 100.30 ಅಡಿ.
ಗರಿಷ್ಠ ಸಾಂದ್ರತೆ - 49.452 ಟಿಎಂಸಿ
ಇಂದಿನ ಸಾಂದ್ರತೆ - 23.047 ಟಿಎಂಸಿ
ಒಳ ಹರಿವು - 9,686 ಕ್ಯೂಸೆಕ್
ಹೊರ ಹರಿವು - 546 ಕ್ಯೂಸೆಕ್
Advertisement