ಸೆಕ್ಸ್ ವಿಡಿಯೋ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದಕ್ಕೆ

ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ. ಈ ಅರ್ಜಿ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ನ್ಯಾಯ ಪೀಠ ಹೇಳಿತು.

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ಪರ ವಕೀಲರು, ಈ ಪ್ರಕರಣವನ್ನು ತ್ವರಿತಗತಿಯಲ್ಲಿ ಪರಿಶೀಲಿಸುವಂತೆ ನ್ಯಾಯ ಪೀಠಕ್ಕೆ ಮನವಿ ಮಾಡಿದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯ ಪೀಠ, ಜಾಮೀನು ಅರ್ಜಿಯನ್ನು ಈಗ ಪರಿಶೀಲಿಸುವ ಅಗತ್ಯವಿಲ್ಲ. ತನಿಖೆ ಮುಂದುವರಿಯಲಿ, ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳಿತು.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ಸೆಕ್ಸ್ ಹಗರಣ: SIT ತನಿಖೆ ಪೂರ್ಣಗೊಂಡ ಬಳಿಕ Exclusive news ಕೊಡ್ತೀನಿ- ದೇವರಾಜೇಗೌಡ

ಈ ಹಿಂದೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜ್ವಲ್ ಅವರ ಸಹೋದರ, ಜೆಡಿಎಸ್ (ಎಸ್) ಎಂಎಲ್ ಸಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ತಂದೆ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com