ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ: ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ!

ಎಲೆಕ್ಟ್ರಿಕ್ ಹಾಗೂ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ಮೇಲೆ ಕಡಿವಾಣ ಹಾಕುವಂತೆ ನೂರಾರು ಚಾಲಕರು ಗುರುವಾರ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.
ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ: ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ!

ಬೆಂಗಳೂರು: ಸಾರಿಗೆ ಸಂಘಟನೆಗಳ ಆಗ್ರಹಕ್ಕೆ ಮಣಿದು ಶುಕ್ರವಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಹಾಗೂ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ವಿರುದ್ಧ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು 133 ವಾಹನಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಎಲೆಕ್ಟ್ರಿಕ್ ಹಾಗೂ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ಮೇಲೆ ಕಡಿವಾಣ ಹಾಕುವಂತೆ ನೂರಾರು ಚಾಲಕರು ಗುರುವಾರ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಹಾಗೂ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು.

ಇದರಂತೆ ಶುಕ್ರವಾರ ಬೆಳಿಗ್ಗೆಯಿಂದಲೇ ನಗರದ 11 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, 133 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳಲ್ಲಿ 29 ಎಲೆಕ್ಟ್ರಿಕ್ ಬೈಕ್ ಗಳಾಗಿವೆ.

ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ: ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ!
ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧಿಸಿದ ಸರ್ಕಾರ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

ಈ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದ್ದು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ತಮ್ಮ ಸೇವೆ ಸ್ಥಗಿತಗೊಳಿಸುವವರೆಗೆ ಕಾರ್ಯಾಚರಣೆ ನಡೆಸಲು ಸಾರಿಗೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಕಾರ್ಯಾಚರಣೆ ವೇಳೆ ಬೈಕ್ ಟ್ಯಾಕ್ಸಿಗಳ ವಿರುದ್ಧವಷ್ಟೇ ಅಲ್ಲದೆ, ಅನುಮತಿ ಪಡೆಯದೇ ವಾಹನಗಳ ಹೊರಭಾಗ ಜಾಹೀರಾತು ಅಂಟಿಸಿಕೊಂಡ ವಾಹನಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಸುಮಾರು 10ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com