3 ಕ್ಷೇತ್ರಗಳ ಉಪಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ BJP ಯಿಂದ 3 ತಂಡ ರಚನೆ

ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ್, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್‌.ಅಶೋಕ್‌ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ 3 ತಂಡಗಳನ್ನು ರಚನೆ ಮಾಡಲಾಗಿದೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ್, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್‌.ಅಶೋಕ್‌ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ.

ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ವರದಿಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧಾರ ಮಾಡಿದೆ.

ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುವ ಮೊದಲು ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸಲಾಗುವುದು. ಅವರ ಅಭಿಪ್ರಾಯ ಸಂಗ್ರಹದ ಬಳಿಕ ನಾವು ಕೆಲವು ಹೆಸರುಗಳನ್ನು ಶಿಫಾರಸು ಮಾಡುತ್ತೇವೆ. ನಂತರ ಹೈಕಮಾಂಡ್ ಹೆಸರುಗಳನ್ನು ಅಂತಿಮಗೊಳಿಸುತ್ತದೆ. ಉಪಚುನಾವಣೆಯ ದಿನಾಂಕಗಳು ಇನ್ನೂ ಘೋಷಣೆಯಾಗಿಲ್ಲ, ಆದರೆ, ಸ್ಪರ್ಧೆಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
ಚನ್ನಪಟ್ಟಣ ಉಪ ಚುನಾವಣೆ: ನೂರಕ್ಕೆ ನೂರು ನನ್ನ ಪತ್ನಿ ಅನಸೂಯ ಸ್ಪರ್ಧಿಸಲ್ಲ- ಸಂಸದ ಡಾ. ಸಿಎನ್ ಮಂಜುನಾಥ್

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮಾಯಿ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಚನ್ನಪಟ್ಟಣದಿಂದ ಜೆಡಿಎಸ್‌‍ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

ಸಂಡೂರು ಕಾಂಗ್ರೆಸ್‌‍ ಶಾಸಕರಾಗಿದ್ದ ಇ.ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com