ಬೈಕ್ ಢಿಕ್ಕಿ: ಸತತ ಕಾರ್ಯಾಚರಣೆ ಬಳಿಕ ರಾಜಾಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ದ್ವಿಚಕ್ರ ವಾಹನ ಸವಾರನ ಮೃತ ದೇಹ ಕೊನೆಗೂ ಪತ್ತೆಯಾಗಿದೆ.
Bengaluru drain
ಮೃತ ಯುವಕ ಹೇಮಂತ್

ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ದ್ವಿಚಕ್ರ ವಾಹನ ಸವಾರನ ಮೃತ ದೇಹ ಕೊನೆಗೂ ಪತ್ತೆಯಾಗಿದೆ.

ಬ್ಯಾಟರಾಯನಪುರ ನಿವಾಸಿ ಹೇಮಂತ್ ಕುಮಾರ್ (28) ಮೃತದೇಹ ವೃಷಭಾವತಿ ಕಾಲುವೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಬ್ಯಾಟರಾಯನಪುರದ ಹೇಮಂತ್ ಎಂದು ಗುರುತಿಸಲಾಗಿದ್ದು, ಈ ಯುವಕ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.

ಎಂದಿನಂತೆ ಕೆಲಸ ಮುಗಿಸಿ, ಶುಕ್ರವಾರ ರಾತ್ರಿ 10:30ರ ವೇಳೆಗೆ ಮನೆಗೆ ತೆರಳುತ್ತಿದ್ದಾಗ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದಿದ್ದ. ಬಳಿಕ ಆತನ ಬೈಕ್ ಪತ್ತೆಯಾಗಿತ್ತಾದರೂ ದೇಹ ನಾಪತ್ತೆಯಾಗಿತ್ತು.

Bengaluru drain
ಡಿವೈಡರ್‌ಗೆ ಬೈಕ್‌ ಡಿಕ್ಕಿ: ರಾಜಕಾಲುವೆಗೆ ಬಿದ್ದ ಯುವಕ ಇನ್ನೂ ನಾಪತ್ತೆ!

ಹೀಗಾಗಿ ಕಳೆದ 2 ದಿನಗಳಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸವಾರನ ಪತ್ತೆಗೆ ರಾಜಕಾಲುವೆಯಲ್ಲಿ ಶೋಧ ಕಾರ್ಯ ಕೈಗೊಂಡಿದ್ದು, ಆತನ ಸುಳಿವು ಇನ್ನೂ ಪತ್ತೆಯಾಗಿರಲಿಲ್ಲ. ಭಾನುವಾರ ಬೆಳಗ್ಗೆಯೂ ಶೋಧ ಕಾರ್ಯ ನಡೆದಿತ್ತು. ಕೊನೆಗೂ ಇದೀಗ ಮೃತ ಹೇಮಂತ್ ಮೃತದೇಹ ಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com