ಭಾರಿ ಮಳೆ ಮುನ್ಸೂಚನೆ: ನಾಳೆ ಉತ್ತರ ಕನ್ನಡದ ಶಾಲೆಗಳಿಗೆ ರಜೆ ಘೋಷಣೆ

ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
heavy rainfall likely over North Interior Karnataka
ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆonline desk

ಬೆಂಗಳೂರು: ಕರಾವಳಿ, ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯ ಪ್ರಕಾರ ಜು.08 ರಂದೂ ಈ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.

heavy rainfall likely over North Interior Karnataka
ಶೃಂಗೇರಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ತುಂಗಾ ನದಿ, ಪ್ರವಾಸಿಗರಿಗೆ ಎಚ್ಚರಿಕೆ!

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಜು.08) ರಂದು ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com