ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಡೆಂಘಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರು ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಘಿ ಹರಡುವಿಕೆ ತಡೆ ಮತ್ತು ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ
ರಾಜ್ಯ ಸರ್ಕಾರ ಡೆಂಘಿ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು; ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು, ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ
ಮಂಗಳೂರು: ಡೆಂಘಿ ಜ್ವರ, ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಚಾಲನೆ

ಕೊಳವೆ ಬಾವಿಗಳು ಹಾಗೂ ನೀರು ಸರಬರಾಜು ಪೈಪುಗಳು ಒಳಚರಂಡಿಯಿಂದ ದೂರದಲ್ಲಿರುವಂತೆ ಕ್ರಮವಹಿಸುವುದು ಮತ್ತು ಪೈಪುಗಳಲ್ಲಿ ನೀರು ಸೋರಿಕೆಯಾಗದಂತೆ ನಿಗಾವಹಿಸಬೇಕು; ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಹಾಗೂ ತೊಟ್ಟಿಯನ್ನು ಸ್ವಚ್ಛಗೊಳಿಸಬೇಕು; ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು; ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮ ವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟೆಚ್ಚರ ನೀಡಿದ್ದಾರೆ.

ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು; ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಅರಿವು ಮೂಡಿಸಬೇಕು ಎಂದು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com