ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ!

ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರವಿಕುಮಾರ್, ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಬಸ್ಸಿನಲ್ಲಿ ಪುಲಿಕುಕ್ಕುಗೆ ತೆರಳಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಸ್ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಆಯುಧದಿಂದ ಮಣಿಕಟ್ಟು ಕತ್ತರಿಸಿಕೊಂಡು ನದಿಗೆ ಹಾರಿದ್ದಾರೆ.
ರಕ್ಷಿಸಲ್ಪಟ್ಟ ಬೆಂಗಳೂರು ಮೂಲದ ರವಿಕುಮಾರ್
ರಕ್ಷಿಸಲ್ಪಟ್ಟ ಬೆಂಗಳೂರು ಮೂಲದ ರವಿಕುಮಾರ್

ಮಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಕುಮಾರಧಾರ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳಿ ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ಮಾರತ್ತಹಳ್ಳಿಯ ರವಿಕುಮಾರ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈತ ಇಂದು ಬೆಳಗ್ಗೆ ನದಿಗೆ ಹಾರಿದ್ದು, ನಂತರ ಮರದ ಕೊಂಬೆಗೆ ಸಿಲುಕಿ ಸಹಾಯಕ್ಕಾಗಿ ಕಿರುಚಾಡಿದ್ದಾರೆ. ನಂತರ ಸ್ಥಳೀಯರು ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕಡಬದ ಕೋಡಿಂಬಾಳ ಗ್ರಾಮದ ಪುಲಿಕುಕ್ಕು ಬಳಿ ನದಿಗೆ ಹಾರಿದ್ದರು ಎನ್ನಲಾಗಿದೆ.

ರಕ್ಷಿಸಲ್ಪಟ್ಟ ಬೆಂಗಳೂರು ಮೂಲದ ರವಿಕುಮಾರ್
ಬೆಂಗಳೂರು: ಕಾಲೇಜು ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರವಿಕುಮಾರ್, ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಬಸ್ಸಿನಲ್ಲಿ ಪುಲಿಕುಕ್ಕುಗೆ ತೆರಳಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಸ್ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಆಯುಧದಿಂದ ಮಣಿಕಟ್ಟು ಕತ್ತರಿಸಿಕೊಂಡು ನದಿಗೆ ಹಾರಿದ್ದಾರೆ. ಆದರೆ, ಭಾರೀ ಮಳೆಯಿಂದ ರಭಸವಾಗಿ ಹರಿಯುತ್ತಿದ್ದ ಕುಮಾರಧಾರಾ ನದಿಯಲ್ಲಿ ಮರದ ಕೊಂಬೆಗೆ ಸಿಲುಕಿಕೊಂಡಿದ್ದು ನಂತರ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಕ್ಷಿಸಲ್ಪಟ್ಟ ಬೆಂಗಳೂರು ಮೂಲದ ರವಿಕುಮಾರ್
ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

ಕಡಬ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ತಂಡ ಬೋಟ್ ಮೂಲಕ ಆತನನ್ನು ರಕ್ಷಿಸಿದ್ದಾರೆ. ನದಿಯಲ್ಲಿ ಫೋನ್ ಕಳೆದುಕೊಂಡಿದ್ದು, ಕೈಗೆ ಗಾಯವಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com