ರಾಜ್ಯದಲ್ಲಿ 1.4 ಕೋಟಿ ಎಕರೆ ಭೂಮಿ ಸರ್ಕಾರದ ಒಡೆತನದಲ್ಲಿದೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದಲ್ಲಿ ಒಟ್ಟಾರೆಯಾಗಿ 14.32 ಲಕ್ಷ ಎಕರೆ ಪ್ರದೇಶದಲ್ಲಿ ಸ್ಥಳ ಪರಿಶೀಲನೆಗೆ ಸೂಚನೆ ನೀಡಲಾಗಿದ್ದು, ಇದರಲ್ಲಿ 10.78 ಲಕ್ಷ ಎಕರೆ ಪ್ರದೇಶವನ್ನು ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳು ಮತ್ತು ಸಚಿವರೊಂದಿಗೆ ನಡೆದ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳು ಮತ್ತು ಸಚಿವರೊಂದಿಗೆ ನಡೆದ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ 1.40 ಕೋಟಿ ಎಕರೆ ಜಮೀನು ಸರ್ಕಾರದ ಒಡೆತನದ್ದಾಗಿದೆ ಎಂದು ಲ್ಯಾಂಡ್‌ಬೀಟ್ ಮೊಬೈಲ್ ಸಾಫ್ಟ್‌ವೇರ್ ಮೂಲಕ ತಿಳಿದುಬಂದಿದೆ. ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಅಧಿಕಾರಿಗಳು ಮತ್ತು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ವಿಚಾರ ತಿಳಿದುಬಂತು.

ರಾಜ್ಯದಲ್ಲಿ ಒಟ್ಟಾರೆಯಾಗಿ 14.32 ಲಕ್ಷ ಎಕರೆ ಪ್ರದೇಶದಲ್ಲಿ ಸ್ಥಳ ಪರಿಶೀಲನೆಗೆ ಸೂಚನೆ ನೀಡಲಾಗಿದ್ದು, ಇದರಲ್ಲಿ 10.78 ಲಕ್ಷ ಎಕರೆ ಪ್ರದೇಶವನ್ನು ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲಿಸಿದ್ದಾರೆ. 1.93 ಲಕ್ಷ ಎಕರೆ ಕಂದಾಯ ಇಲಾಖೆಗೆ ಸೇರಿದ್ದು, 20 ವಿವಿಧ ಇಲಾಖೆಗಳ ಜಮೀನುಗಳನ್ನು ಗುರುತಿಸಲಾಗಿದೆ.

91,000 ಭೂಮಿ ಒತ್ತುವರಿಯಾಗಿದೆ ಎಂದು ಗುರುತಿಸಲಾಗಿದೆ. ಆಗಸ್ಟ್‌ ತಿಂಗಳಿನಿಂದ ಸರ್ಕಾರವು ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ತಮ್ಮ ಜಮೀನು ಎಲ್ಲಿದೆ, ಒತ್ತುವರಿಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಇತರೆ ಇಲಾಖೆಗಳಿಗೂ ಅವಕಾಶವಿದೆ ಎಂದು ಹೇಳಿದ ಸಚಿವರು, ವಿವಿಧ ಇಲಾಖೆಗಳ ಆಸ್ತಿ ರಕ್ಷಣೆಗೆ ಎಸ್ಟೇಟ್ ಅಧಿಕಾರಿಗಳನ್ನು ನೇಮಿಸಬೇಕು. ತಮ್ಮ ಇಲಾಖೆಗೆ ಮಂಜೂರಾದ ಜಮೀನಿನ ಮಾಹಿತಿಯನ್ನು ಆರ್ ಟಿಸಿಯಲ್ಲಿ ನಮೂದಿಸಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳು ಮತ್ತು ಸಚಿವರೊಂದಿಗೆ ನಡೆದ ಸಭೆ
ಮುಂದಿನ 50 ವರ್ಷಗಳಲ್ಲಿ ಭೂಮಿಗೆ ಕೊರತೆ: ಸರ್ಕಾರಿ ಜಮೀನು ಕಾಯ್ದಿರಿಸುವಂತೆ ಶಾಸಕರಿಗೆ, ಸಂಸದರಿಗೆ ಪತ್ರ: ಅಶೋಕ್

ಜಮೀನು ಮಾರಾಟದಲ್ಲಿ ವಂಚನೆಗಳನ್ನು ತಡೆಗಟ್ಟಲು ಪಹಣಿ-ಆಧಾರ್ ಲಿಂಕ್ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಭ್ರಷ್ಟಾಚಾರ ಪ್ರಕರಣಗಳು ಬಾಕಿ ಇರುವ ಕಾರಣ ಇದನ್ನು ಅಭಿಯಾನವಾಗಿ ತೆಗೆದುಕೊಳ್ಳಬೇಕು. 737 ಸರ್ವೇಯರ್ ಹುದ್ದೆಗಳು ಮಂಜೂರಾಗಿದ್ದು, ಶೀಘ್ರ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಭೂ ಸುರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್, ಇಂಡೆಕ್ಸ್ ಮತ್ತು ಡಿಜಿಟೈಸ್ ಮಾಡಲಾಗಿದೆ. ಇದುವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಪ್ರಾಯೋಗಿಕವಾಗಿ 31 ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ದಾಖಲೆಗಳ ಡಿಜಿಟಲೀಕರಣವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಇದರೊಂದಿಗೆ ದಾಖಲೆಗಳನ್ನು ಟ್ಯಾಂಪರಿಂಗ್ ಮಾಡಿ ನಷ್ಟವನ್ನು ತಡೆಯಬಹುದು. ಇದು ನಾಗರಿಕರಿಗೆ ಭೂ ದಾಖಲೆಗಳನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com