
ನವದೆಹಲಿ: ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ ಎಂಸಿ) ತಿರಸ್ಕರಿಸಿದೆ. ಇದರಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸ್ವಕ್ಷೇತ್ರ ಮೆಡಿಕಲ್ ಕಾಲೇಜ್ ತರುವ ಯತ್ನಕ್ಕೆ ತೀವ್ರ ಹಿನ್ನೆಡೆಯಾಗಿದೆ.
ರಾಜ್ಯದಲ್ಲಿ ಐದು ಕಡೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಮೂರಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ. ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.
ಸಿಬ್ಬಂದಿ ಕೊರತೆ ಮತ್ತು ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಆದರೆ, ಪ್ರಸ್ತಾವಿತ ಐದು ಕಾಲೇಜುಗಳ ಪೈಕಿ ಮೂರಕ್ಕೆ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್ ವೈದ್ಯಕೀಯ ಕಾಲೇಜು, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ರಾಮನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ತರಬೇಕು ಎಂಬುದು ನಮ್ಮೆಲ್ಲರ ಬೇಡಿಕೆಯಾಗಿತ್ತು. ಈ ವಿಚಾರವನ್ನು ಬಜೆಟ್ ನಲ್ಲೂ ಸೇರಿಸಲಾಗಿತ್ತು. ಆದರೆ ಸಿಬ್ಬಂದಿ ಕೊರತೆ ಎಂದು ಅನುಮತಿ ನೀಡಿಲ್ಲ ಎಂಬ ವಿಚಾರ ತಿಳಿಸಿದ್ದು, ಈ ಬಗ್ಗೆ ಗಮನಹರಿಸುತ್ತೇವೆ ಎಂದು ತಿಳಿಸಿದ್ದಾರೆ.
Advertisement