ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿ: ಸಿಎಂ ಗೆ ಪ್ರಸ್ತಾವನೆ

ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು
ಸಿಎಂ ಗೆ ಪ್ರಸ್ತಾವನೆ ಸಲ್ಲಿಸಿದ ರಾಮನಗರ ಜಿಲ್ಲಾ ಮುಖಂಡರು
ಸಿಎಂ ಗೆ ಪ್ರಸ್ತಾವನೆ ಸಲ್ಲಿಸಿದ ರಾಮನಗರ ಜಿಲ್ಲಾ ಮುಖಂಡರು

ಬೆಂಗಳೂರು: ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್ ಅವರು, ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು. ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ಅಗತ್ಯ. ಬೆಂಗಳೂರು ಜಾಗತಿಕ ಮನ್ನಣೆ ಹೊಂದಿದ್ದು, ಈ ಜಿಲ್ಲೆಯ ಹೆಸರು ಉಳಿಸಿಕೊಳ್ಳಲು ನನ್ನ ಮುಖಂಡತ್ವದಲ್ಲಿ ಜಿಲ್ಲೆಯ ನಾಯಕರು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಸಿಎಂ ಗೆ ಪ್ರಸ್ತಾವನೆ ಸಲ್ಲಿಸಿದ ರಾಮನಗರ ಜಿಲ್ಲಾ ಮುಖಂಡರು
ರಾಮನಗರ: ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ. ನಮ್ಮ ಹೆಸರನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ ಎಂದು ವಿವರಿಸಿದ್ದಾರೆ.

ಹೊಸ ಜಿಲ್ಲೆಗೆ ನೀಡಿರುವ ಪ್ರಸ್ತಾವನೆಯಲ್ಲಿ ಯಾವ ಯಾವ ಕ್ಷೇತ್ರಗಳು ಬರಲಿವೆ ಎಂಬ ಪ್ರಶ್ನೆಗೆ, “ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ. ಇರುವ ಜಿಲ್ಲೆ ಹಾಗೇ ಇರಲಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ - ಈ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣ ಮುಂದಾಗಿದ್ದೇವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com