ರಸ್ತೆ ಅಪಘಾತ: ರಾಜ್ಯದಲ್ಲಿ 1 ವರ್ಷದಲ್ಲಿ 9,943 ಮಂದಿ ಸಾವು; ಸಿಎಂ ಸಿದ್ದರಾಮಯ್ಯ ಕಳವಳ

ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9,943 ಜನರು ಸಾವನ್ನಪ್ಪಿದ್ದಾರೆ. ಈ ಬೆಳವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ,

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಅವರು, ‘ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು.

CM Siddaramaiah
ಜಿಲ್ಲಾಧಿಕಾರಿಗಳು ಮಹಾರಾಜರಲ್ಲ, ಈ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಜಿಲ್ಲಾ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

‘ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು’ ಎಂದು ಸಲಹೆ ನೀಡಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com