ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡಿ: ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಯಾರೂ ದಯಾಮರಣ ಕೇಳಬಾರದು. ಆಕ್ಸಿಜನ್ ದುರಂತದ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವಂತೆ ಮತ್ತು ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Complaint against Karnataka CM Siddaramaiah
ಸಿದ್ದರಾಮಯ್ಯ
Updated on

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಇಂದು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿಆಕ್ಸಿಜನ್ ಲಭ್ಯವಾಗದೆ ಮೃತಪಟ್ಟವರ ಕುಟುಂಬಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.

ಯಾರೂ ದಯಾಮರಣ ಕೇಳಬಾರದು. ಆಕ್ಸಿಜನ್ ದುರಂತದ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವಂತೆ ಮತ್ತು ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Complaint against Karnataka CM Siddaramaiah
MUDA Scam: ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪ; CM ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು!

ಇದಕ್ಕು ಮುನ್ನ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.

ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com