ಅಧಿಕಾರಿಗಳ ಬೆನ್ನು ತಟ್ಟುವುದು ಗೊತ್ತು, ಕಿವಿ ಹಿಂಡುವುದು ಗೊತ್ತು: ಸಿಎಂ ಸಿದ್ದರಾಮಯ್ಯ

ಮೂರು ತಿಂಗಳ ನಂತರ ಮತ್ತೆ ಸಭೆ ನಡೆಸಲಾಗುವುದು. ಆಗಲೂ ಸುಧಾರಣೆಯಾಗದಿದ್ದರೆ ಸಹಿಸಲಾಗದು ಎಂದು ಸಿಎಂ ಸಿದ್ದರಾಮಯ್ಯ ಡಿಸಿ ಹಾಗು ಸಿಇಒಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರಶಂಸಿಸುತ್ತೇನೆ, ಹಾಗೆಯೇ ಕೆಲಸ ಮಾಡದವರ ಕಿವಿ ಹಿಂಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಡಿಸಿಗಳು, ಸಿಇಒಗಳು, ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಮ್ಯಾರಥಾನ್ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉತ್ತಮ ಕೆಲಸಕ್ಕಾಗಿ ಅವರನ್ನು ಹೇಗೆ ಪ್ರಶಂಸಿಸಬೇಕು ಎಂದು ನನಗೆ ತಿಳಿದಿದೆ ಎಂದು ಹೇಳಿದರು. ಮೂರು ತಿಂಗಳ ನಂತರ ಮತ್ತೆ ಸಭೆ ನಡೆಸಲಾಗುವುದು. ಆಗಲೂ ಸುಧಾರಣೆಯಾಗದಿದ್ದರೆ ಸಹಿಸಲಾಗದು ಎಂದು ಸಿಎಂ ಸಿದ್ದರಾಮಯ್ಯ ಡಿಸಿ ಹಾಗು ಸಿಇಒಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌

ಮಂಗಳವಾರ ಎರಡು ದಿನಗಳ ಸುದೀರ್ಘ ಸಭೆ ಮುಕ್ತಾಯಗೊಳಿಸಿ ಮಾತನಾಡಿದ ಅವರು,ಎರಡೂ ದಿನ 10 ಗಂಟೆಗಳ ಕಾಲ ಸಭೆ ನಡೆಸಿದ್ದು, 30 ಇಲಾಖೆಗಳ 68 ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು. "ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಸಿಇಒ, ಎಸ್ಪಿ ಸಮನ್ವಯದಿಂದ ಎಲ್ಲಾ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯವಿದೆ. ಸರ್ಕಾರ ಸಮಾಜದ ಅಸಮಾನತೆ ತೊಡೆದು ಹಾಕುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಸರ್ಕಾರದ ಹಣ ದುರುಪಯೋಗ ಆಗದಂತೆ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಬೇಕು. ಚರ್ಚೆಯ ಸಂದರ್ಭದಲ್ಲಿ ಹಲವು ಲೋಪದೋಷಗಳ ಕುರಿತು ಪ್ರಸ್ತಾಪಿಸಲಾಗಿದೆ. ಇವುಗಳನ್ನು ಸರಿಪಡಿಸಿಕೊಂಡು ಹೋಗಬೇಕು" ಎಂದು ಸೂಚನೆ ನೀಡಿದರು.

ಸಿದ್ದರಾಮಯ್ಯ
ರಸ್ತೆ ಅಪಘಾತ: ರಾಜ್ಯದಲ್ಲಿ 1 ವರ್ಷದಲ್ಲಿ 9,943 ಮಂದಿ ಸಾವು; ಸಿಎಂ ಸಿದ್ದರಾಮಯ್ಯ ಕಳವಳ

ಕಂದಾಯ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಸಿಎಂ ಹೇಳಿದರು.

ಕಲುಷಿತ ನೀರಿನಿಂದ ಜನರು ಸತ್ತರೆ ಅಥವಾ ಅನಾರೋಗ್ಯಕ್ಕೆ ಒಳಗಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಗತ್ಯವಿದ್ದರೆ ಅವರ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ಜಿಲ್ಲೆಯಲ್ಲಿ ಜನ ಸ್ಪಂದನ, ಸಾರ್ವಜನಿಕ ಕುಂದುಕೊರತೆ ಸಭೆಗಳು ನಡೆಯಬೇಕು. ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಹಾಜರಾಗಬೇಕು' ಎಂದರು. ಇಲ್ಲಿಯವರೆಗೆ, ಈ ಕುಂದುಕೊರತೆ ಸಭೆಗಳಲ್ಲಿ ಸ್ವೀಕರಿಸಿದ 40,702 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 8,000 ಬಾಕಿ ಉಳಿದಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com