ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದಿಂದ ನೋಟಿಸ್ ಜಾರಿ

ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ‌ ಮಾಹಿತಿ ಇದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ.

ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದು, 7 ದಿನಗಳ ಒಳಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ‌ ಮಾಹಿತಿ ಇದೆ. ಕರ್ನಾಟಕ ಸರ್ಕಾರವು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಂಚಿಕೆಯಿಂದ ಗ್ಯಾರಂಟಿ ಯೋಜನೆಗಳಿಗೆ ಯೋಜನೆಗಳಿಗೆ 14,730.53 ಕೋಟಿ ರೂ ಬಳಸಿಕೊಳ್ಳಲು ತೀರ್ಮಾನ ತೆಗೆದುಕೊಂಡಿದೆ.

ರಾಜ್ಯಗಳಲ್ಲಿನ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ವಿಶೇಷ ಕೇಂದ್ರ ಸಹಾಯ (ಎಸ್‌ಸಿಎ)ವೂ ಇದೆ. ಹಾಗಾಗಿ ಭಾರತ ಸಂವಿಧಾನದ 338 ನೇ ವಿಧಿಯ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಕಡ್ಡಾಯವಾಗಿ ಅನುಸರಿಸಲು ಆಯೋಗ ಬದ್ಧವಾಗಿದೆ. ದಯವಿಟ್ಟು ಈ ವಿಷಯದ ಬಗ್ಗೆ ವಿವರವಾದ ವರದಿಯನ್ನ 7 ದಿನಗಳೊಳಗೆ ಆಯೋಗಕ್ಕೆ ಒದಗಿಸಬೇಕೆಂದು ತಿಱಿಸಿದ್ದಾರೆ. ಅಲ್ಲದೆ, ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ವಿಧಾನಸೌಧ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದು!

ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಖಂಡಿಸಿತ್ತು. ಇದರ ವಿರುದ್ಧ ಆಗಸ್ಟ್​ನಲ್ಲಿ ಪ್ರತಿಭಟನೆ ಕೂಡ ನಡೆಸಿತ್ತು.

ಇದಲ್ಲದೆ, ಜುಲೈ 15ರಂದು ಆರಂಭವಾಗಲಿರುವ ಚಳಿಗಾಲ ಅಧಿವೇಶನದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಸಮರ ಸಾರುವ ಸಾಧ್ಯತೆಗಳಿವೆ.

ಮುಂಬರುವ ಅಧಿವೇಶನದಲ್ಲಿ ನಾವು ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ದುರ್ಬಳಕೆಯಾಗದಂತೆ ಯತ್ನಿಸಲಾಗುವುದು. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಅಭಿವೃದ್ಧಿ ಹಣವನ್ನು ಬಳಕೆ ಮಾಡುವುದನ್ನು ನಾವು ವಿರೋಧಿಸುತ್ತೇವೆ ಎಂದು ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com