ವಿಡಿಯೋ​ ಕ್ರಿಯೇಟರ್​ ವಿಕ್ಕಿಪೀಡಿಯಾ ವಿಕಾಸ್​​​​ಗೆ ಪೊಲೀಸರ ಎಚ್ಚರಿಕೆ: ಕಾರಣವೇನು?

ಡ್ರಗ್ಸ್ ಬಗೆಗಿನ ಪ್ರಚೋದನಾತ್ಮಕ ಹೇಳಿಕೆಯ ವೀಡಿಯೋ ಕೂಡಲೇ ಡಿಲೀಟ್ ಮಾಡಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: 'ನಾನು ನಂದಿನಿ, ಬೆಂಗಳೂರಿಗೆ ಬಂದೀನಿ' ಎಂಬ ಹಾಡಿನ ಹಾಸ್ಯಮಯ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ವಿಡಿಯೋ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ ಎಂಬಾತನಿಗೆ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ವಿಕಾಸ್‌ನನ್ನು ಬೈಯಪ್ಪನಹಳ್ಳಿ ಪೊಲೀಸರು ಫೋನ್ ಮೂಲಕ ಸಂಪರ್ಕಿಸಿದ್ದಾರೆ.

ಡ್ರಗ್ಸ್ ಬಗೆಗಿನ ಪ್ರಚೋದನಾತ್ಮಕ ಹೇಳಿಕೆಯ ವೀಡಿಯೋ ಕೂಡಲೇ ಡಿಲೀಟ್ ಮಾಡಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್​​ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್​ ವೀಕ್ಷಣೆ!

ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ವಿಕಾಸ್ ಅವರು ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆನ್ನಲಾಗಿದೆ.

ವಿಕಾಸ್ ಅವರು, ಪ್ರಚಲಿತ ವಿದ್ಯಾಮಾನಗಳು, ರಾಜಕೀಯ ಸೇರಿ ಹಲವು ವಿಷಯಗಳನ್ನು ಆಧರಿಸಿ ಹಾಸ್ಯ, ವಿಡಂಬನೆಯ ವಿಡಿಯೋಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಅದರಂತೆ ಹಾಸ್ಯ ವಿಡಿಯೋವೊಂದರಲ್ಲಿ ಮಾದಕ ಕುರಿತು ಮಾತನಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಇದನ್ನು ಗಮನಿಸಿದ ಬೈಯಪ್ಪನಹಳ್ಳಿ ಠಾಣೆ ಪೊಲೀಸರು, ಫೋನ್ ನಲ್ಲಿ ವಿಕಾಸ್ ನನ್ನು ಸಂಪರ್ಕಿಸಿ, ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಇನ್ನು ಮುಂದೆ ಇಂತಹ ವಿಡಿಯೋ ಮಾಡಿದರೆ, ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com