
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ಹೈದರಾಬಾದ್‌ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ.
ನಿಗಮದಿಂದ ನಕಲಿ ಖಾತೆಗಳಿಗೆ ವರ್ಗಾವಣೆಯಾದ ಹಣದ ಜಾಡು ಹಿಡಿದ ಎಸ್‌ಐಟಿ, ಪ್ರಕರಣದಲ್ಲಿ ಬಂಧಿತನಾಗಿದ್ದ ಸತ್ಯನಾರಾಯಣ ವರ್ಮಾ ಐಷಾರಾಮಿ ಕಾರು ಡೀಲರ್‌ಗೆ 3.3 ಕೋಟಿ ರೂಪಾಯಿ ನೀಡಿದ್ದರು. ಎಸ್‌ಐಟಿ ಅಧಿಕಾರಿಗಳು ಕಾರನ್ನು ಪತ್ತೆಹಚ್ಚಿ ವಶಪಡಿಸಿಕೊಂಡು ಡೀಲರ್‌ಗೆ ಹಿಂತಿರುಗಿಸಿದ್ದು ಹಣವನ್ನೂ ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಹಗರಣದಲ್ಲಿ ಸತ್ಯನಾರಾಯಣ ವರ್ಮಾ 13ನೇ ಆರೋಪಿಯಾಗಿದ್ದಾರೆ. ಇನ್ನು ನ್ಯಾಯಾಲಯದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ವಿರುದ್ಧ ಸತ್ಯನಾರಾಯಣ ಹಲವು ಆರೋಪಗಳನ್ನು ಮಾಡಿದ್ದಾರೆ. ಸಿಐಡಿ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದು, ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ. ತನ್ನ ಬಂಧನದ ನಂತರ ನಾಲ್ಕು ದಿನಗಳ ಕಾಲ ಅಧಿಕಾರಿಗಳು ನನ್ನ ಕುಟುಂಬಕ್ಕೆ ತಿಳಿಸಲಿಲ್ಲ ಎಂದು ಸತ್ಯನಾರಾಯಣ ವರ್ಮಾ ನ್ಯಾಯಾಲಯಕ್ಕೆ ತಿಳಿಸಿದರು.
ಸಿಐಡಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನ್ಯಾಯಾಲಯದ ಮುಂದೆ ಗೌಪ್ಯ ಹೇಳಿಕೆ ನೀಡಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅರ್ಜಿ ಸಲ್ಲಿಕೆಯಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ.
ಮಾಜಿ ಸಚಿವ ನಾಗೇಂದ್ರ ಅವರ ಆಪ್ತರಿಂದ ಬೆದರಿಕೆ ಇದೆ ಎಂದು ಸತ್ಯನಾರಾಯಣ ವರ್ಮಾ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದು ಗಂಭೀರ ಆರೋಪ, ಆದರೆ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಲ್ಲಿಯವರೆಗೆ ಪ್ರಶ್ನಿಸಲು ಧೈರ್ಯ ಮಾಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು.
ಸದ್ಯ ಎಸ್‌ಐಟಿ, ಸಿಬಿಐ ಮತ್ತು ಇಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಶುಕ್ರವಾರ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಬಂಧಿಸಿದೆ.
Advertisement