
ಧಾರವಾಡ: ಕಲಘಟಗಿ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳು ರೈತರಾಗಿದ್ದು, ನಾಯಿಗಳ ಸಹಾಯದಿಂದ ಜಿಂಕೆಯನ್ನು ಬೇಟೆಯಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವದಂತಿ ಆಧರಿಸಿ ಅರಣ್ಯಾಧಿಕಾರಿಗಳು ದಿಢೀರ್ ತಪಾಸಣೆ ನಡೆಸಿ ವಾಹನಗಳನ್ನು ಪರಿಶೀಲಿಸಿದಾಗ ಜಿಂಕೆ ಮಾಂಸ ಇರುವುದು ಪತ್ತೆಯಾಗಿದೆ.
ಅರಣ್ಯಾಧಿಕಾರಿ ಅರುಣ್ ಕುಮಾರ್ ಮಾತನಾಡಿ, ಶುಕ್ರವಾರ ಕಂಡ್ಲಿ ಗ್ರಾಮ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ವಾಹನದಲ್ಲಿದ್ದ ಜಿಂಕೆ ಮಾಂಸ- ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಕೆಲವು ಆರೋಪಿಗಳ ಹುಡುಕಾಟ ಮುಂದುವರೆದಿದೆ. ಮೂವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಮಾಂಸವನ್ನು ತಮ್ಮ ಸಂಬಂಧಿಕರ ಮನೆಗೆ ಸಾಗಿಸುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
Advertisement