ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು (ಡಿಎಸ್‌ಇಎಲ್) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ರೋಗಗಳು ಹರಡುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದೆ.

ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ಶಾಲಾ ಆವರಣ ಮತ್ತು ಸಮೀಪದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಲು ಮತ್ತು ಒದ್ದೆಯಾದ ತ್ಯಾಜ್ಯವನ್ನು ತಕ್ಷಣವೇ ವಿಲೇವಾರಿ ಮಾಡಲು ಇಲಾಖೆಯು ಶಾಲೆಗಳಿಗೆ ಸೂಚನೆ ನೀಡಿದೆ.

ಶಾಲಾ ವಿದ್ಯಾರ್ಥಿಗಳು ಅಂತಹ ಪ್ರದೇಶಗಳ ಬಳಿ ತಿರುಗಾಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಮತ್ತು ವಿಲೇವಾರಿ ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು" ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸಾಂದರ್ಭಿಕ ಚಿತ್ರ
ಡೆಂಗ್ಯೂ ಜ್ವರ: ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವ ಸಲಹೆಗಳು

ಶಿಕ್ಷಣ ಸಂಸ್ಥೆಗಳು ಗ್ರಾಮ ಪಂಚಾಯತಿ ಮತ್ತು ನಾಗರಿಕ ಸಂಸ್ಥೆಗಳ ಜೊತೆಗೂಡಿ ಡೆಂಗ್ಯೂ ವಿರೋಧಿ ಕ್ರಮಗಳಿಗಾಗಿ ಔಷಧಿ ಸಿಂಪಡಣೆ ಮತ್ತು ಫಾಗಿಂಗ್ ಕಾರ್ಯಾಚರಣೆಗಳನ್ನು ನಡೆಸಬೇಕು. ಶಾಲೆಗಳಲ್ಲಿನ ನೀರಿನ ಸಂಗ್ರಹಕಗಳನ್ನು (ತೊಟ್ಟಿ, ಬ್ಯಾರೆಲ್ ಇತ್ಯಾದಿ)ಗಳನ್ನು ವಾರಕ್ಕೊಮ್ಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚಬೇಕು ಎಂದು ಸೂಚಿಸಿದೆ.

ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲುವ ಕೆಲಸ ಮಾಡಬೇಕು. ಡೆಂಗ್ಯೂ, ಚಿಕೂನ್‌ಗುನ್ಯಾ ಮತ್ತು ಝಿಕಾ ವೈರಸ್‌ನಂತಹ ರೋಗಗಳ ಲಕ್ಷಣಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಶಾಲಾ ವಿದ್ಯಾರ್ಥಿಗಳಲ್ಲಿ ಜ್ವರದ ಪ್ರಕರಣಗಳು ವರದಿಯಾದರೆ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆಸ್ಟರ್ ಸಿಎಂಐ ಆಸ್ಪತ್ರೆಯ ನಿಯೋನಾಟಾಲಜಿ ಮತ್ತು ಪೀಡಿಯಾಟ್ರಿಕ್ಸ್‌ನ ಸಲಹೆಗಾರ್ತಿ ಡಾ ಪರಿಮಳಾ ವಿ ತಿರುಮಲೇಶ್ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ಮಕ್ಕಳ ರೋಗಲಕ್ಷಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕುಯ ಮಕ್ಕಳು ಬೆಳಿಗ್ಗೆ ಮತ್ತು ಸಂಜೆ ಹೊರಾಂಗಣದಲ್ಲಿದ್ದಾಗ ಉದ್ದ ತೋಳಿನ ಬಟ್ಟೆಗಳನ್ನು ಧರಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿರ್ಜಲೀಕರಣವನ್ನು ತಪ್ಪಿಸಲು ಸಾಕಷ್ಟು ನೀರನ್ನು ಕುಡಿಯಬೇಕು. ಕನಿಷ್ಠ ಎರಡು-ಮೂರು ಲೀಟರ್ ನೀರು ಮತ್ತು ನೀರಿನಂಶ ಹೆಚ್ಚಿರುವ ಕಲ್ಲಂಗಡಿ ಮತ್ತು ಕಿತ್ತಳೆಯಂತಹ ಹಣ್ಣುಗಳನ್ನು ಸೇವಿಸಬೇಕು. ಮಕ್ಕಳು ಮತ್ತು ಯುವಕರು ಸಮತೋಲಿತ ಆಹಾರ ಕ್ರಮವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com