ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಶಂಕಿತ ಪ್ರಕರಣಕ್ಕೆ ಓರ್ವ ಬಲಿ

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಮೊದಲ ದಿನವೇ ರೋಗಿಯ ಮೆದುಳಿನಲ್ಲಿ ಊತ ಕಂಡು ಬಂದಿದೆ. ಅತೀವ್ರ ಜ್ವರ ಕಾಣಿಸಿಕೊಂಡಿದೆ. ಇದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಡೆಂಗ್ಯೂ ಜ್ವರ
ಡೆಂಗ್ಯೂ ಜ್ವರ
Updated on: 

ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇದೀಗ ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಬಟ್ವಾಳ ಮೂಲದ ವ್ಯಕ್ತಿಯೋರ್ವ ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಪುತ್ತೂರು ತಾಲೂಕಿನ ಬಂಟ್ವಾಳದ ಶಂಭೂರು ನಿವಾಸಿ ಯತೀಶ್ ಮೃತ ವ್ಯಕ್ತಿ. ಯತೀಶ್‌ಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಬಂಟ್ವಾಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡೆಂಗ್ಯೂ ಜ್ವರ
ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಪರೀಕ್ಷೆಯಲ್ಲಿ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಪ್ಲೇಟ್ಲೆಟ್ಗಳು ಕುಸಿದಿದ್ದು, ಕೂಡಲೇ ಐಸಿಯುಗೆ ಸ್ಥಳಾಂತರಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಜ್ವರದ ಮೊದಲ ದಿನವೇ ರೋಗಿಯ ಮೆದುಳಿನಲ್ಲಿ ಊತ ಕಂಡು ಬಂದಿದೆ. ಅತೀವ್ರ ಜ್ವರ ಕಾಣಿಸಿಕೊಂಡಿದೆ. ಇದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com