
ಕಲಬುರಗಿ: ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ರಾಥೋಡ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಸರ್ಧೆಗಿಳಿಸಿದ್ದು, ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಅನ್ನ ಭಾಗ್ಯ ಯೋಜನೆಯು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತದೆ.
Advertisement