
ಬೆಂಗಳೂರು: ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ ಎಂದು ಎಸ್‌ಸಿ/ಎಸ್‌ಟಿ ಕಲ್ಯಾಣ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ ಅವರು ಮಂಗಳವಾರ ಆರೋಪಿಸಿದರು,
ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ. ಇದರಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ ಮತ್ತು ತಾಂಡಾ ಅಭಿವೃದ್ಧಿ ನಿಗಮ ಕೂಡ ಸೇರಿವೆ. ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.
ಹಲವು ಸಮಿತಿಗಳು ಹಣಕಾಸು ಇಲಾಖೆಯ ವಹಿವಾಟಿನ ಮೇಲೆ ನಿಗಾ ಇಡಲು ವಿಫಲವಾಗಿದೆ. ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕಲ್ಯಾಣ ಯೋಜನೆಗಳ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿದರು
Advertisement