ಖಾಸಗಿ ವಲಯದ ತಾಂತ್ರಿಕ ಹುದ್ದೆ ನೇಮಕಾತಿಯಲ್ಲಿ ಹಸ್ತಕ್ಷೇಪವಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ನಾವು ಟೆಕ್ನಿಕಲ್ ವಿಚಾರಗಳಿಗೆ ಕೈ ಹಾಕಲ್ಲ. ಅಲ್ಲಿ ಯಾವ ರೀತಿ ಜನ ಬೇಕು, ಅದನ್ನು ಅವರು ತೀರ್ಮಾನ ಮಾಡುತ್ತಾರೆ. ನಮ್ಮ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡಿದೆ.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಖಾಸಗಿ ವಲಯದ ತಾಂತ್ರಿಕ ಉದ್ಯೋಗಗಳ ನೇಮಕಾತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ನಾವು ಟೆಕ್ನಿಕಲ್ ವಿಚಾರಗಳಿಗೆ ಕೈ ಹಾಕಲ್ಲ. ಅಲ್ಲಿ ಯಾವ ರೀತಿ ಜನ ಬೇಕು, ಅದನ್ನು ಅವರು ತೀರ್ಮಾನ ಮಾಡುತ್ತಾರೆ. ನಮ್ಮ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡಿದೆ ಎಂದು ಹೇಳಿದರು.

ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಮಾಡಲಾಗುತ್ತಿದೆ. ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಇರಬಹುದು. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಇರಬೇಕು. ಇದರ ಬಗ್ಗೆ ತೀರ್ಮಾನ ನಾವು ಮಾಡಿದ್ದೇವೆ ಹಾಗೂ ವಿಧೇಯಕ ಮಂಡಿಸುತ್ತಿದ್ದೇವೆಂದು ತಿಳಿಸಿದರು.

ಡಿಸಿಎಂ ಡಿಕೆ.ಶಿವಕುಮಾರ್
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ನಮ್ಮದು ಕನ್ನಡ ಪರ ಸರ್ಕಾರ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರ ನಿರ್ಧಾರಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿರುವ ಕುರಿತು ಮಾತನಾಡಿ, ಟಕ್ನಿಕಲ್ ಇದ್ದ ಕಡೆ ಏನು ಮಾಡಲು ಆಗಲ್ಲ. ನಾವು ಕೂಡ ಅರ್ಥ ಮಾಡಿಕೊಳ್ಳುತ್ತೇವೆ ಎಂದರು.

ಅವರು ಕೂಡ ರಾಜ್ಯದಿಂದಲೇ ಬೆಳದಿರುವವರು. ಟೆಕ್ನಿಕಲ್ ಬೇಕಾಗುವ ಕಡೆ ರಿಯಾಯಿತಿ ಕೋಡುತ್ತೇವೆ. ಸರ್ಕಾರದ ಗಮನಕ್ಕೆ ಅವರು ತರಬೇಕು. ಸದನ ಇರುವುದರಿಂದ ಸಂಪೂರ್ಣ ಮಾಹಿತಿ ಹೇಳಲು ಆಗಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com